ಕರ್ನಾಟಕದ ಸುರಕ್ಷಿತ ಭವಿಷ್ಯ, ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್
ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ನಮ್ಮ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ. ಅದನ್ನು ಖಾತರಿಪಡಿಸುವಲ್ಲಿ ಒಗ್ಗಟ್ಟಾಗಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದ ಸುರಕ್ಷಿತ ಭವಿಷ್ಯ ಮತ್ತು ನಮ್ಮ ಜನರ ಕಲ್ಯಾಣ ನಮ್ಮ ಮೊದಲ ಆದ್ಯತೆಯಾಗಿದೆ. ಅದನ್ನು ಖಾತರಿಪಡಿಸುವಲ್ಲಿ ಒಗ್ಗಟ್ಟಾಗಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ರಾಜ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಎಐಸಿಸಿ ಆಯ್ಕೆ ಮಾಡಿರುವ ಬೆನ್ನಲ್ಲೇ ಡಿಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಈ ನಡುವೆ ಡಿಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್'ನ ಅಧ್ಯಕ್ಷ ಶ್ರೀನಿವಾಸ್ ಬಿವಿಯವರು ನವದೆಹಲಿಯಲ್ಲಿ ಡಿಕೆ.ಶಿವಕುಮಾರ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ.ಶಿವಕುಮಾರ್ ಅವರು, ಎಲ್ಲವೂ ಚೆನ್ನಾಗಿದೆ ಮತ್ತು ಚೆನ್ನಾಗಿರುತ್ತದೆ. ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಅದನ್ನು ಒಪ್ಪಿಕೊಂಡಿದ್ದೇವೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


