ರಾಜ್ಯ

ಗದಗ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ; ಅಪ್ರಾಪ್ತ ಬಾಲಕರಿಬ್ಬರು ಸ್ಥಳದಲ್ಲೇ ಸಾವು

ಸವಾರನ ನಿಯಂತ್ರಣ ತಪ್ಪಿ ಬೈಕ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ‌ ನಡೆದಿದೆ.

ಗದಗ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ; ಅಪ್ರಾಪ್ತ ಬಾಲಕರಿಬ್ಬರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Published On :

ಗದಗ: ಸವಾರನ ನಿಯಂತ್ರಣ ತಪ್ಪಿ ಬೈಕ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ‌ ನಡೆದಿದೆ.

ಮೃತರನ್ನು 15 ವರ್ಷದ ಶ್ರೀಧರ ಗಡಗಿ ಹಾಗೂ 16 ವರ್ಷದ ಅನೂಪ್‌ ಕುಮಾರ ಇಟಗಿ ಎಂದು ಗುರುತಿಸಲಾಗಿದೆ. ಒಂದು ಬೈಕ್ ನಲ್ಲಿ ಮೂವರು ತೆರಲುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಶ್ರೀಧರ ಗಡಗಿ ಮತ್ತು ಅನೂಪ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮೌನೇಶ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಅಪಘಾತಕ್ಕೆ ಸಂಬಂಧಿಸಿದಂತೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.