ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ನಿಧನ
ನಾರಾಯಣ ನೇತ್ರಾಯಲಯದ ಮುಖ್ಯಸ್ಥ ಭುಜಂಗ ಶೆಟ್ಟಿ (69) ಇಂದು ನಿಧನರಾದರು.

ಬೆಂಗಳೂರು: ನಾರಾಯಣ ನೇತ್ರಾಯಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು.
ಭುಜಂಗ ಶೆಟ್ಟಿ ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂಜೆ ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು.
ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


