ರಾಜ್ಯ

ಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ

ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.

ಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ
ವಿಧಾನಸೌಧ
Published On :

ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವ ಕುರಿತು ಮಾಹಿತಿ ನೀಡಿದರು. 

ನಮ್ಮ ಸರ್ಕಾರ ರಚನೆ ಮೇಲೆ ಇದು ಮೊದಲ ಸುದ್ದಿಗೋಷ್ಠಿ. ನಾನು, ಡಿಕೆ ಶಿವಕುಮಾರ್, 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಬೇರೆ ರಾಜ್ಯಗಳ ಸಿಎಂಗಳು, ವಿಪಕ್ಷ ನಾಯಕರು ಬಂದಿದ್ದರು. ಬಿಜೆಪಿಯೇತರ ಪಕ್ಷಗಳ ಅಧ್ಯಕ್ಷರು ಬಂದು ಶುಭಕೋರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್​, ಸುರ್ಜೇವಾಲ ಶುಭ ಕೋರಿದ್ದಾರೆ. ನಾವು ಸಹ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದರು.

ಇದೇ ವೇಳೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಪ್ರಮಾಣ ವಚನ ಭೋದಿಸಬೇಕಿರುವ ಕಾರಣ ಸೋಮವಾರದಿಂದ  3 ದಿನಗಳ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಹಂಗಾಮಿ ಸ್ಪೀಕರ್​ ಆಗಿ ಆರ್​.ವಿ.ದೇಶಪಾಂಡೆ ನೇಮಕಗೊಳ್ಳಲಿದ್ದಾರೆ. ಬಳಿಕ ನೂತನ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿದ್ದೇವೆ, ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಮೋದಿಯಂತೆ ಮೆಟ್ಟಿಲಿಗೆ ಹಣೆಮುಟ್ಟಿ ನಮಸ್ಕರಿಸಿ ವಿಧಾನಸೌಧದ ಪ್ರವೇಶಿಸಿದ ಡಿಕೆ ಶಿವಕುಮಾರ್, ವಿಡಿಯೋ ವೈರಲ್!
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್​, ಕೆ.ಹೆಚ್​.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್​ ಅಹ್ಮದ್ ಖಾನ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.