ರಾಜ್ಯ

ಆನೇಕಲ್: ನಂಬರ್ ಬೋರ್ಡ್ ಇಲ್ಲದೆ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು

ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ.

ಆನೇಕಲ್: ನಂಬರ್ ಬೋರ್ಡ್ ಇಲ್ಲದೆ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಆನೇಕಲ್ ಅಪಘಾತ
Published On :

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ.

ತಮ್ಮನ್ನು ಹಿಡಿಯಲು ಬಂದ ಪೊಲೀಸರ ಬೈಕ್ ಗಳ ಮೇಲೆಯೇ ದುಷ್ಕರ್ಮಿಗಳು ಕಾರು ಚಲಾಯಿಸಿ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ತಮಿಳುನಾಡು ಪೊಲೀಸರ (Tamil Nadu Police) ಕೈಯಿಂದ ತಪ್ಪಿಸಿಕೊಳ್ಳಲು ಮುಂಭಾಗದಲ್ಲಿ ಬಂದ ದ್ವಿಚಕ್ರ ವಾಹನಗಳ ಮೇಲೆ ಕಾರು ಹರಿಸಿ ಎಸ್ಕೇಪ್ ಆಗಿರುವ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಿನಿಮಾ ಶೈಲಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಜ್ಯ ಗಡಿ ತಮಿಳುನಾಡಿನ ಜೂಜುವಾಡಿ ಬಳಿ ನಂಬರ್ ಪ್ಲೇಟ್ ಇಲ್ಲದ ಕಾರು ಅನುಮಾನಸ್ಪದವಾಗಿ ಸಂಚರಿಸುತ್ತಿತ್ತು. ಇದನ್ನು ನೋಡಿದ ತಮಿಳುನಾಡು ಪೊಲೀಸರು ಚೇಸ್ ಮಾಡಿದ್ದಾರೆ. ಈ ವೇಳೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಪೋಲೀಸ್ ಠಾಣಾ ವ್ಯಾಪ್ತಿಯ ಬಳ್ಳೂರು ಗ್ರಾಮದಲ್ಲಿ ಮಿನಿ ಬಸ್ ಮತ್ತು ಮಿನಿ ಟೆಂಪೊ ಅಡ್ಡ ಬಂದು ತಪ್ಪಿಸಿಕೊಳ್ಳಲಾಗದೆ ಕಾರು ಸಿಕ್ಕಿಹಾಕಿಕೊಂಡಿತ್ತು. ಈ ವೇಳೆ ಅಡ್ಡಗಟ್ಟಿದ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.

ಪೊಲೀಸರು ಸಮೀಪ ಬರುತ್ತಿದ್ದಂತೆ ಅಡ್ಡಲಾಗಿ ಬರುತ್ತಿದ್ದ ಎರಡು ಮೂರು ದ್ವಿಚಕ್ರ ವಾಹನಗಳ ಮೇಲೆ ಕಿರಾತಕರು ಕಾರು ಚಲಾಯಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಒಂದು ದ್ವಿಚಕ್ರ ವಾಹನವನ್ನು ಒಂದಷ್ಟು ದೂರಕ್ಕೆ ಎಳೆದುಕೊಂಡು ಹೋಗಲಾಗಿದೆ. ಈ ಭೀಕರ ದೃಶ್ಯ ಕಂಡ ಗ್ರಾಮಸ್ಥರು ಬಿಚ್ಚಿಬಿದ್ದಿದ್ದಾರೆ. ಘಟನೆ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.  ಅಪರಾಧ ಕೃತ್ಯ ಎಸಗಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರಾ ಎನ್ನುವ ಬಗ್ಗೆಯೂ ಪೋಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳ ಬಂಧನಕ್ಕೆ ತಮಿಳುನಾಡು ಹಾಗೂ ಕರ್ನಾಟಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.