ರಾಜ್ಯ

ವಿಧಾನಸಭೆ ಅಧಿವೇಶನ; ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!

ರಾಜ್ಯ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನ; ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!
ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ
Published On :

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ.

ಬಸವರಾಜ್ ಶಿವಗಂಗಾ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಆಕ್ಷೇಪಗಳು ವ್ಯಕ್ತವಾದವು.

ಸದನದಲ್ಲಿ ಗದ್ದಲ ಶುರುವಾಗುತ್ತಿದ್ದಂತೆಯೇ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಈ ನಡುವೆ ವಿಜಯಪುರ ಕ್ಷೇತ್ರದ ಶಾಸಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹಿಂದುತ್ವ ಮತ್ತು ಗೋಮಾತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.