ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರು ಮುಖಾಮುಖಿ: ಕುಶಲೋಪರಿ ವಿಚಾರಿಸಿದ ಡಿ.ಕೆ.ಶಿವಕುಮಾರ್
ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ.

ಬೆಂಗಳೂರು: ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ.
ಮಾಜಿ ಸಿಎಂ ಬೊಮ್ಮಾಯಿ, ಬಸವನಗೌಡ ಪಾಟೀಲ್ ಯತ್ನಾಶ್, ಅಶೋಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಹ್ಯಾಂಡ್ ಶೇಕ್ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು.
ರಮೇಶ್ ಜಾರಕಿಹೊಳಿಗೆ ಹೇಗಿದ್ದೀರಿ ಎಂದು ಕೇಳಿ ಕೈಕುಲುಕಿದ್ದಾರೆ. ಅಲ್ಲದೆ, ವಿಪಕ್ಷ ಸದಸ್ಯರ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಫೋಟೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


