ರಾಜ್ಯ

ಸಿರಾದಿಂದ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತರು ಹಾಸನ ಬಸ್ ನಿಲ್ದಾಣದಲ್ಲಿ ಪತ್ತೆ

ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸೋಮವಾರ ಹಾಸನದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

ಸಿರಾದಿಂದ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತರು ಹಾಸನ ಬಸ್ ನಿಲ್ದಾಣದಲ್ಲಿ ಪತ್ತೆ
ಮಕ್ಕಳ ಚಿತ್ರ
Published On :

ಹಾಸನ: ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸೋಮವಾರ ಹಾಸನದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. 

ಸಿರಾ ತಾಲೂಕಿನ ಚಿಕ್ಕಬಾಣಗೆರೆ ನಿವಾಸಿಗಳಾದ ಬಾನು [13], ಮಧುಕುಮಾರ್ [13] ಮಂಜುಳಾ [13] ಮತ್ತು ಮಹಾಲಕ್ಷ್ಮಿ [15] ಶನಿವಾರದಂದು ನಾಪತ್ತೆಯಾಗಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. 

ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಹಾಸನ ವಿಸ್ತರಣಾ ಪೊಲೀಸರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಪತ್ತೆ ಮಾಡಿದ್ದಾರೆ. 

ಮಕ್ಕಳು ಕೂಲಿ ಕಾರ್ಮಿಕರ ಕುಟುಂಬದಿಂದ ಬಂದಿದ್ದು ಮಕ್ಕಳು ಯಾಕಾಗಿ ಮನೆ ಬಿಟ್ಟು ಬಂದಿದ್ದರು ಎಂದು ಬಹಿರಂಗಪಡಿಸಲು ನಿರಾಕರಿಸಿದ್ದು ಬೇರೆ ಬೇರೆ ಕಾರಣಗಳನ್ನು ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ. 

ಹಾಸನ ಪೊಲೀಸರು ಸಿರಾ ಪೊಲೀಸರ ನೆರವಿನಿಂದ ಮಕ್ಕಳನ್ನು ಪೋಷಕರಿಗೆ ಒಪ್ಪಿಸಿದ ಬಳಿಕ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.