ನಾಗರಿಕರ ಜೀವ ರಕ್ಷಣೆ ನಮ್ಮ ಕರ್ತವ್ಯ, ರಾಜ್ಯದ ಎಲ್ಲಾ ಅಂಡರ್‌ಪಾಸ್‌ಗಳ ವರದಿಗೆ ಆದೇಶಿಸಲಾಗಿದೆ: ಡಿಸಿಎಂ ಡಿಕೆ.ಶಿವಕುಮಾರ್
ನಾಗರೀಕರ ಜೀವ ರಕ್ಷಣೆ ನಮ್ಮ ಕರ್ತವ್ಯವಾಗಿದ್ದು, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ನಾಗರೀಕರ ಜೀವ ರಕ್ಷಣೆ ನಮ್ಮ ಕರ್ತವ್ಯವಾಗಿದ್ದು, ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಮಳೆಗೆ ಯುವತಿಯೊಬ್ಬಳು ಮೃತಪಟ್ಟ ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೆಕ್ಕಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರಿನ 18 ಅಂಡರ್‌ಪಾಸ್‌ಗಳು ಸೇರಿದಂತೆ ರಾಜ್ಯದ ಎಲ್ಲಾ ಅಂಡರ್‌ಪಾಸ್‌ಗಳ ಕುರಿತು ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಹೇಳಿದರು.
ಎಲ್ಲವೂ ಒಂದೇ ದಿನದಲ್ಲಿ ಆಗುವುದಿಲ್ಲ. ಆದರೆ, ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕಾ ಕ್ರಮಗಳ ಕೈಗೊಳ್ಳಲಾಗುತ್ತಿದೆ. ನಮ್ಮ ನಾಗರಿಕರ ಜೀವ ರಕ್ಷಣೆ ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡಿ, ಭಾರೀ ಮಳೆ ಮತ್ತು ಅಂಡರ್‌ಪಾಸ್'ಗಳು ಜಲಾವೃತವಾಗುವುದು ಈ ಹಿಂದೆಯೂ ಆಗಿದೆ. ಆದರೆ ಈ ಹಿಂದೆ ಯಾವುದೇ ಸಾವು ಸಂಭವಿಸಿದ್ದು ನನಗೆ ನೆನಪಿಲ್ಲ . ಬಿಬಿಎಂಪಿಯ ಸಕಾಲಿಕ ಕ್ರಮ ಕೈಗೊಂಡಿದ್ದೇ ಆಗಿದ್ದರೆ ಸಾವನ್ನು ತಪ್ಪಿಸಬಹುದಿತ್ತು. ಬಿಬಿಎಂಪಿಯಿಂದ ಕೆಲವು ಲೋಪಗಳಾಗಿವೆ. ಅದನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


