ರಾಜ್ಯ

RCB vs GT: ಏನೇ ಆದ್ರು ಆರ್‌ಸಿಬಿ ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ; ಡಿಕೆ ಶಿವಕುಮಾರ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್​ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ.

RCB vs GT: ಏನೇ ಆದ್ರು ಆರ್‌ಸಿಬಿ ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ; ಡಿಕೆ ಶಿವಕುಮಾರ್
ತಮ್ಮ ಪುತ್ರಿ ಹಾಗೂ ಪುತ್ರನೊಂದಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಡಿಕೆ ಶಿವಕುಮಾರ್
Published On :

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್​ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ. ಆರ್‌ಸಿಬಿಯ ಪ್ರಯತ್ನದ ಹೊರತಾಗಿಯೂ ಜಿಟಿ ಮುಂದೆ ಸೋಲೊಪ್ಪಿಕೊಳ್ಳಬೇಕಾಯಿತು. ಹೀಗಾಗಿ, ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್‌ ಪ್ರವೇಶಿಸಿದೆ.

ಇತ್ತ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪುತ್ರಿ ಐಶ್ವರ್ಯಾ ಹಾಗೂ ಪುತ್ರನೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ರೋಚಕ ಐಪಿಎಲ್ ಪಂದ್ಯವನ್ನು ವೀಕ್ಷಿಸಿದೆ ಎಂದು ಫೋಟೊಗಳನ್ನು ಹಂಚಿಕೊಂಡಿದ್ದಾರೆ. 

'ನಮ್ಮ‌‌ ಹುಡುಗರು ಈ ಸಾರಿ  ಸೋತಿರಬಹುದು. ಆದರೆ, ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ ಎಂದು ಡಿಕೆ ಶಿವಕುಮಾರ್ ಅಭಿಮಾನಿಗಳಿಗೆ ತಿಳಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.