ರಾಜ್ಯ

ಡಿಸಿಎಂ ಡಿಕೆಶಿಗೆ ಒಲಿದ ಅದೃಷ್ಟದ ಮನೆ ಕುಮಾರಕೃಪಾ; ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ವಾಸವಿದ್ದ ಅದೃಷ್ಟದ ಮನೆ, ಕುಮಾರಕೃಪ ಸರ್ಕಾರಿ ಬಂಗಲೆಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಯಕೆಯಂತೆ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಡಿಸಿಎಂ ಡಿಕೆಶಿಗೆ ಒಲಿದ ಅದೃಷ್ಟದ ಮನೆ ಕುಮಾರಕೃಪಾ; ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್
ಸಿದ್ದರಾಮಯ್ಯ-ಡಿಕೆ ಶಿವಕುಮಾರ್
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ವಾಸವಿದ್ದ ಅದೃಷ್ಟದ ಮನೆ, ಕುಮಾರಕೃಪ ಸರ್ಕಾರಿ ಬಂಗಲೆಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬಯಕೆಯಂತೆ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ತಮ್ಮ ಅದೃಷ್ಟದ ಕುಮಾರಕೃಪ ಪೂರ್ವದ ನಂ.1 ವಸತಿಗೃಹಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ರಾಜ್ಯ ಸರ್ಕಾರ ಈಗ ಕುಮಾರಕೃಪ ವಸತಿಗೃಹವನ್ನು ಡಿಕೆ ಶಿವಕುಮಾರ್ ಅವರಿಗೆ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸಕ್ಕೆ ಶಿಫ್ಟ್ ಆದ ನಂತರ ಡಿಕೆ ಶಿವಕುಮಾರ್ ಅವರು ಕುಮಾರಕೃಪದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಉಳಿದಂತೆ ಇತರ ನೂತನ ಸಚಿವರಿಗೂ ಮನೆಗೆ ಹಂಚಿಕೆ ಮಾಡಲಾಗಿದ್ದು, ಮಾಜಿ ಸಿಎಂ ಬೊಮ್ಮಾಯಿ ಅವರಿದ್ದ ರೇಸ್ ಕೋರ್ಸ್ ರಸ್ತೆಯ ನಂ.1, ರೇಸ್ ವ್ಯೂ ಕಾಟೇಜ್ ಅನ್ನು ಎಂ.ಬಿ ಪಾಟೀಲ್‌ ಅವರಿಗೆ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿದ್ದ  ನಂ.4, ರೇಸ್ ವ್ಯೂ ಕಾಟೇಜ್ ಅನ್ನು ಪ್ರಿಯಾಂಕ್ ಖರ್ಗೆ ಅವರಿಗೆ, ಕೆ.ಜೆ ಜಾರ್ಜ್ ಅವರಿಗೆ ನಂ.2, ರೇಸ್ ವ್ಯೂ ಕಾಟೇಜ್ ಮತ್ತು ಜಿ. ಪರಮೇಶ್ವರ್ ಅವರಿಗೆ ಸದಾಶಿವನಗರದ ನಂ.94/ಎ ಮನೆಯನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.