ರಾಜ್ಯ

ರಾಜ್ಯದಾದ್ಯಂತ 31 ವ್ಯಕ್ತಿಗಳ ಅದ್ಧೂರಿ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ

ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದಾದ್ಯಂತ 31 ವ್ಯಕ್ತಿಗಳ ಅದ್ಧೂರಿ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ
ಬಸವಣ್ಣ
Published On :

ಬೆಂಗಳೂರು: ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ, ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಶ್ರೀಕೃಷ್ಣ ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಸುತ್ತೋಲೆಯ ಪ್ರಕಾರ, ಪ್ರತಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಜಯಂತಿಗಳನ್ನು ಆಯೋಜಿಸಲು 5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ (ಡಿಸಿ) ಸರ್ಕಾರ ಅಧಿಕಾರ ನೀಡಿದೆ.

ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಜಯಂತಿಗಳನ್ನು ಆಯೋಜಿಸಲು 50 ಸಾವಿರ ಹಾಗೂ ತಾಲೂಕು ಮಟ್ಟದಲ್ಲಿ 20 ಸಾವಿರ ರೂ.ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.