ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಹಾನಿಯನ್ನು ಅನುಭವಿಸಿದ್ದು, ರೈತರಿಗೆ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯವರು ಆಗ್ರಹಿಸಿದ್ದಾರೆ.

ಕಲಬುರಗಿ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಹಾನಿಯನ್ನು ಅನುಭವಿಸಿದ್ದು, ರೈತರಿಗೆ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯವರು ಆಗ್ರಹಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಧಿಕಾರಿಗಳ ಜತೆ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ಮುಂಗಾರು ಆರಂಭವಾಗುತ್ತಿದ್ದಂತೆ ರೈತರ ಹೊಲಗಳಲ್ಲಿ ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ.ಕೃಷಿ ಚಟುವಟಿಕೆ ಆರಂಭಿಸಲಿದ್ದು, ರೈತರಿಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ರೈತರು ಅತಿವೃಷ್ಟಿ ಮಾತ್ರವಲ್ಲದೆ ಕೊಳೆ ರೋಗದಿಂದ ಬೆಳೆ ನಷ್ಟ ಅನುಭವಿಸಿದ್ದರು. ಹೀಗಾಗಿ ಬೆಳೆ ನಷ್ಟ ಪರಿಹಾರ ನೀಡುವ ಮೂಲಕ ರೈತರಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಇದೇ ವೇಳೆ ಕಳಪೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಪೂರೈಕೆಯ ಬಗ್ಗೆ ದೂರು ಬಾರದಂತೆ ಕೃಷಿ ಇಲಾಖೆ ರೈತರಿಗೆ ಗುಣಮಟ್ಟದ ಬೀಜ ಮತ್ತು ಗೊಬ್ಬರವನ್ನು ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಎಲ್ಲಾ ನೂತನ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


