ರಾಜ್ಯ

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೊಹಮ್ಮದ್ ಸಾವು; ಪ್ರಕರಣ ಸಿಐಡಿಗೆ ವರ್ಗಾವಣೆ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೊಹಮ್ಮದ್ ಸಾವು; ಪ್ರಕರಣ ಸಿಐಡಿಗೆ ವರ್ಗಾವಣೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. 

ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಪೊಲೀಸರು ಆರೋಪಿ ಬೆಂಗಳೂರಿನ ಬೇಗೂರು ರಸ್ತೆಯಲ್ಲಿ ನೆಲೆಸಿದ್ದ ಮೊಹಮ್ಮದ್ ಹುಸೇನ್ ಮನೆಗೆ ತೆರಳಿದ್ದರು. ಆದರೆ ಈ ವೇಳೆ ಮೊಹಮ್ಮದ್ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದನು. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. 

ಪೊಲೀಸರೇ ತನ್ನ ಮಗನನ್ನು ಕಟ್ಟಡದಿಂದ ತಳ್ಳಿ ಹತ್ಯೆ ಮಾಡಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನಲೆ ಸಂಕ್ಷಿಪ್ತವಾದ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪದಡಿ ಮೊಹಮ್ಮದ್ ಹುಸೇನ್ ವಿರುದ್ಧ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸ್ ಸಿಬ್ಬಂದಿ ತೆರಳಿದ್ದಾಗ ಘಟನೆ ನಡೆದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.