ರಾಜ್ಯ

2024ರ ಲೋಕಸಭಾ ಚುನಾವಣೆ ಗುರಿ: ಕರ್ನಾಟಕದಲ್ಲಿ ಹೂಡಿದ್ದ ತಂತ್ರವನ್ನೇ ಬಳಸಲು ಕಾಂಗ್ರೆಸ್ ಚಿಂತನೆ!

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ - ಹೊಸ ಕಾರ್ಯತಂತ್ರಗಳು, ಮತ್ತು ನಿರೂಪಣೆಗಳು ಸಹ ಪ್ರಮುಖ ಕಾರಣವಾಗಿವೆ. ಆಡಳಿತಾರೂಢ ಬಿಜೆಪಿ...

2024ರ ಲೋಕಸಭಾ ಚುನಾವಣೆ ಗುರಿ: ಕರ್ನಾಟಕದಲ್ಲಿ ಹೂಡಿದ್ದ ತಂತ್ರವನ್ನೇ ಬಳಸಲು ಕಾಂಗ್ರೆಸ್ ಚಿಂತನೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಚುನಾವಣಾ ಸಂದರ್ಭದಲ್ಲಿ ಕೈ ಪಾಳಯ ರೂಪಿಸಿದ ಹೊಸ - ಹೊಸ ಕಾರ್ಯತಂತ್ರಗಳು, ಮತ್ತು ನಿರೂಪಣೆಗಳು ಸಹ ಪ್ರಮುಖ ಕಾರಣವಾಗಿವೆ. ಆಡಳಿತಾರೂಢ ಬಿಜೆಪಿ ವಿರುದ್ಧದ ಭ್ರಷ್ಟಾಚಾರ ಆರೋಪವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್​ ಸಮರ್ಥವಾಗಿ ಜನರ ಮುಂದೆ ಬಿಂಬಿಸುವಲ್ಲಿಯೂ ಯಶ ಕಂಡಿದೆ.

ಇತ್ತೀಚೆಗಷ್ಟೇ ಕ್ಯಾಬಿನೆಟ್ ಅನುಮೋದನೆಯನ್ನು ಪಡೆದಿರುವ 5 ಗ್ಯಾರಂಟಿಗಳು ಕೂಡ ಪ್ರಚಾರದ ವೇಳೆ ಕಾಂಗ್ರೆಸ್ ಪರ ಅಲೆ ಏಳುವಂತೆ ಮಾಡಿತ್ತು. ಕರ್ನಾಟಕದಲ್ಲಿ ಅಮೋಘ ವಿಜಯ ಸಾಧಿಸಿರುವ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದು, ಈ ಚುನಾವಣೆಗೊ ರಾಜ್ಯದಲ್ಲಿ ಅನುಸರಿಸಿದ ಮಾರ್ಗವನ್ನೇ ಅನುಸರಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸರ್ಕಾರದ ವಿರುದ್ಧ ತಂತ್ರ ರೂಪಿಸುವಲ್ಲಿ ಕಾಂಗ್ರೆಸ್ ಯಶಸ್ಸು ಗಳಿಸುತ್ತಿದ್ದು, ಕರ್ನಾಟಕದಲ್ಲಿ ಫಲ ನೀಡಿದ ತಂತ್ರಗಳನ್ನು ಲೋಕಸಭಾ ಚುನಾವಣೆಯಲ್ಲೂ ಬಳಸಿದರೆ ಅದೂ ಕೂಡ ಫಲ ನೀಡುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಪ್ರಿಯಾಂಕ್ ಖರ್ಗೆಯವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ಮತ್ತು ಮತಾಂತರ ವಿರೋಧಿ ಮಸೂದೆಗಳು ಸೇರಿದಂತೆ ಹಿಂದಿನ ಬಿಜೆಪಿ ಆಡಳಿತದ ನೀತಿಗಳನ್ನು ಪರಿಶೀಲಿಸುತ್ತಿದ್ದು, ಬಜರಂಗದಳ ಮತ್ತು ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಂಡರೂ ಅಚ್ಚರಿಯಿಲ್ಲ ಎಂದು ಹೇಳಿದ್ದರು.

ಎಂಬಿ ಪಾಟೀಲ್ ಅವರು ಮಾತನಾಡಿ, ಪಕ್ಷದ 6ನೇ ಗ್ಯಾರಂಟಿಯಾಗಿದ್ದ ಹಿಂದಿನ ಆಡಳಿತಾರೂಫ ಸರ್ಕಾರದ ಎಲ್ಲಾ ಹಗರಣಗಳ ಮರು ತನಿಖೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ತಿಳಿಸಿದ್ದರು.

ಇದರೊಂದಿಗೆ ಲೋಕಸಭೆ ಚುನಾವಣೆಗೂ ಮುನ್ನ ಭ್ರಷ್ಟಾಚಾರದ ವಿಷಯದಲ್ಲಿ ಪಕ್ಷದ ನಿಲುವು ಬದಲಾಗುವುದಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ ಸಾರಿದೆ.

ಸದ್ಯಕ್ಕೆ ಕರ್ನಾಟಕದಿಂದ ಒಬ್ಬರೇ ಸಂಸದರಿರುವುದರಿಂದ 28 ಲೋಕಸಭಾ ಸ್ಥಾನಗಳಲ್ಲಿ 15-18 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಾಳಯದ ತಂತ್ರಜ್ಞರು ಯೋಜನೆ ರೂಪಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಈ ಫಲಿತಾಂಶಗಳು ನಾಯಕರ ನಡುವಿನ ಒಗ್ಗಟ್ಟಿನ ಮೇಲೆ ಮತ್ತು ಖಾತರಿಗಳು ಎಷ್ಟು ಪರಿಣಾಮಕಾರಿಯಾಗಿ ಕಾರ್ಯಗತಗೊಳ್ಳುತ್ತವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ, ಕರ್ನಾಟಕದಲ್ಲಿ ಬಿಜೆಪಿ ಸ್ಪರ್ಧಿಸಿದ್ದ 27 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದು 51.75 ಶೇಕಡಾ ಮತಗಳನ್ನು ಗಳಿಸಿತ್ತು. ಕಾಂಗ್ರೆಸ್ 1 (ಶೇ. 32.11 ಮತ ಹಂಚಿಕೆ) ಮತ್ತು ಜೆಡಿಎಸ್ 1 (ಶೇ. 9.74)  ಸ್ಥಾನದಲ್ಲಿ ಮಾತ್ರ ಗೆಲವು ಸಾಧಿಸಿತ್ತು.

ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದರು. ಅಂದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದ ಕಾರಣ ಕಾಂಗ್ರೆಸ್ 21 ಸ್ಥಾನಗಳಲ್ಲಿ ಸ್ಪರ್ಧಿಸಿ 7 ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.