ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಸಾಕಷ್ಟು ಬಾರಿ ಅವಕಾಶದಿಂದ ವಂಚಿತನಾಗಿದ್ದೆ. ಧರಂಸಿಂಗ್, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಅವಕಾಶ ಸಿಕ್ಕಿರಲಿಲ್ಲ. ಆದರೆ, ನಾನು ತಾಳ್ಮೆಯಿಂದ ಕಾದಿದ್ದೆ ಎಂದು ಹೇಳಿದರು.
ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಮಾಡಿಕೊಂಡರೆ ನಾನು ಏನು ಮಾಡಲು ಆಗುತ್ತೆ? ಮಾತನಾಡುವವರು ಮಾತನಾಡಲಿ. ನಾನೇನು ಮಾತನಾಡುವುದಿಲ್ಲ ಎಂದು ತಿಳಿಸಿದರು.
ಕಳೆದ ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ, ಡಿಸಿಎಂ ಹಾಗೂ 10 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ಇಂದು ರಾಜಭವನದಲ್ಲಿ ಗಾಜಿನ ಮನೆಯಲ್ಲಿ 24 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


