ರಾಜ್ಯ

ಮೈಸೂರು: ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ

ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ.

ಮೈಸೂರು: ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ
ಸಂಗ್ರಹ ಚಿತ್ರ
Published On :

ಮೈಸೂರು: ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ.

ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ.

ವಿಜಯನಗರ ಮೊದಲನೇ ಹಂತದ ನಿವಾಸಿ ಕ್ರಿಸ್ಟೋ ಶನಿವಾರ ರಾತ್ರಿ ಮನೆಯಿಂದ ತೆರಳಿದ್ದರು. ತಡರಾತ್ರಿಯಾದರೂ ಬಂದಿರಲಿಲ್ಲ. ಕುಟುಂಬದವರು ಹುಡುಕುವ ಪ್ರಯತ್ನ ಮಾಡಿದ್ದರು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿನ ನೀರಿನ ಸಂಪ್‌ನಲ್ಲಿ ಭಾನುವಾರ ಬೆಳಿಗ್ಗೆ ಶವ ಸಿಕ್ಕಿದೆ.

ಮಾಹಿತಿ ತಿಳಿದ ಪೊಲೀಸರು ಶ್ವಾನದಳ, ವಿಧಿವಿಜ್ಞಾನ ತಜ್ಞರ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಹೊರತೆಗೆದಿದ್ದಾರೆ.

ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.