ರಾಜ್ಯ

ಆಡಳಿತಕ್ಕೆ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಬಿ.ದಯಾನಂದ ನೇಮಕ

ರಾಜ್ಯ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗುತ್ತಿದ್ದಂತೆಯೇ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.

ಆಡಳಿತಕ್ಕೆ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಬಿ.ದಯಾನಂದ ನೇಮಕ
ಐಪಿಎಸ್ ಅಧಿಕಾರಿ ಬಿ. ದಯಾನಂದ
Published On :

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗುತ್ತಿದ್ದಂತೆಯೇ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಲವು ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.

ಗುಪ್ತಚರ ಇಲಾಖೆ ಹೆಚ್ಚುವರಿ ಡಿಜಿಪಿಯಾಗಿದ್ದ ಬಿ. ದಯಾನಂದ ಅವರನ್ನು ಎತ್ತಂಗಡಿ ಮಾಡಿ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ.

Story image

ಕ್ರಿಮಿನಲ್ ತನಿಖೆ ವಿಭಾಗದ ಎಡಿಜಿಪಿ ಆಗಿದ್ದ ಶರತ್ ಚಂದ್ರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.