ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ: ಅಶ್ವತ್ಥ್ ನಾರಾಯಣಗೆ ಹೈಕೋರ್ಟ್ ಬಿಗ್ ರಿಲೀಫ್!
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಬೆಂಗಳೂರು: ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನೂ ಮುಗಿಸಬೇಕು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಎಫ್ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು(ಮೇ,30) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ.
ಚುನಾವಣೆಯಲ್ಲಿ ಸೋಲಿಸಬೇಕೆಂಬ ರೀತಿಯಲ್ಲಿ ನೀಡಿದ ಹೇಳಿಕೆ ನೀಡಲಾಗಿತ್ತು. ಫೆಬ್ರವರಿ ತಿಂಗಳ ದೂರು ಸಂಬಂಧ ಎನ್ಸಿಆರ್ ದಾಖಲಾಗಿತ್ತು. ಸರ್ಕಾರ ಬದಲಾದ ನಂತರ ಹೊಸ ದೂರು ನೀಡಲಾಗಿದೆ. ರುದ್ದೇಶ ಪೂರ್ವಕವಾಗಿ ಎಫ್ಐಆರ್ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಐಪಿಸಿ ಸೆಕ್ಷನ್153 ರಂತೆ ಅಪರಾಧವಾಗುವ ಅಂಶಗಳಿಲ್ಲ ಹೀಗಾಗಿ ಎಫ್ಐಆರ್ಗೆ ತಡೆ ನೀಡುವಂತೆ ಅಶ್ವತ್ಥ್ ನರಾಯಣ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವಡಗಿ ವಾದ ಮಂಡಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲ, ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ತಡೆ ಬೇಡ ಎಂದು ವಾದಿಸಿದರು. ಈ ವಾದ ವಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಎಫ್ಐಆರ್ಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ.
2023ರ ಫೆ.15ರಂದು ಮಂಡ್ಯದ ಸಾತನೂರಿನ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಂದು ಸಚಿವರಾಗಿದ್ದ ಅಶ್ವತ್ಥನಾರಾಯಣ ಅವರು, ಟಿಪ್ಪುವನ್ನು ಉರಿಗೌಡ-ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಫೆ.17ರಂದು ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


