ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವಿನ ಪ್ರಕರಣ ಸಿಐಡಿಗೆ ಹಸ್ತಾಂತರ
ದಾವಣಗೆರೆ ಜಿಲ್ಲೆಯಲ್ಲಿ ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ.

ಬೆಂಗಳೂರು: ದಾವಣಗೆರೆ ಜಿಲ್ಲೆಯಲ್ಲಿ ಆರ್‌ಟಿಐ ಕಾರ್ಯಕರ್ತನ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಕುಟುಂಬಸ್ಥರ ದೂರಿನ ಮೇರೆಗೆ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಒಬ್ಬರನ್ನು ಇಲಾಖೆ ಅಮಾನತು ಮಾಡಿದೆ.
ಮೃತ ಹರೀಶ್ ಹಳ್ಳಿ (36) ಚನ್ನಗಿರಿ ತಾಲೂಕಿನ ಕಬ್ಬಾಳ ಗ್ರಾಮದವರಾಗಿದ್ದು, ಭೂ ವ್ಯವಹಾರ ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದರು. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪೊಲೀಸರು ಅವರನ್ನು ಗಾಂಧಿನಗರ ಠಾಣೆಗೆ ಕರೆತರುತ್ತಿದ್ದಾಗ ಈ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಹರೀಶ್ ಅವರನ್ನು ಠಾಣೆಗೆ ಕರೆತರುತ್ತಿದ್ದ ಕಾರು ತೋಳಹುಣಸೆಯ ಮೇಲ್ಸೇತುವೆಯ ಮೇಲೆ ಹಾದು ಹೋಗುತ್ತಿದ್ದಾಗ, ಅವರು ಕಾರಿನಿಂದ ಜಿಗಿದು ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರೀಶ್ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊನೆಯುಸಿರೆಳೆದಿದ್ದಾರೆ.
ಚನ್ನಗಿರಿ ತಾಲೂಕಿನ ಕಬ್ಬಾಳ ಗ್ರಾಮದ ನಿವಾಸಿ ಹರೀಶ್ ಎಂಬುವರು ಆಸ್ತಿ ದಾಖಲೆ ಸೃಷ್ಟಿಸಿ ದೋಚಿರುವ ಆರೋಪ ಎದುರಿಸುತ್ತಿದ್ದರು. ಕಾಕನೂರ ಗ್ರಾಮದ ಪತ್ನಿಯ ಸ್ಥಳದಿಂದ ಈತನನ್ನು ಬಂಧಿಸಲಾಗಿದೆ.
ಪೊಲೀಸರು ಹರೀಶ್ ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಪಿಎಸ್‌ಐ ಕೃಷ್ಣಪ್ಪ ಹಾಗೂ ಇಬ್ಬರು ಪೊಲೀಸ್ ಪೇದೆಗಳ ವಿರುದ್ಧ ಅವರ ಪತ್ನಿ ದೂರು ದಾಖಲಿಸಿದ್ದರು. ದಾವಣಗೆರೆ ಎಸ್ಪಿ ಡಾ.ಕೆ.ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


