ರಾಜ್ಯ

Kannada Rajyotsava at Chamrajpet Maidan: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

Kannada Rajyotsava at Chamrajpet Maidan: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ
ಚಾಮರಾಜಪೇಟೆ ಮೈದಾನ
Published On :

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ.

ನವೆಂಬರ್ 1 ರಿಂದ 3 ರವರೆಗೆ ಚಾಮರಾಜಪೇಟೆಯ ಈದ್ಗಾ ಮೈದಾನ (Chamarajpet Maidan)ದಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟಕ್ಕೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಮಂಗಳವಾರ ಜಿಲ್ಲಾಧಿಕಾರಿಗೆ ಅನುಮತಿ ನೀಡಿದೆ.

ಆದರೆ, ಈದ್ಗಾ ಮೈದಾನದಲ್ಲಿ ಆಚರಿಸಲು ಕಾನೂನು ಅಥವಾ ಇನ್ಯಾವುದೇ ಅಡ್ಡಿ ಉಂಟಾದರೆ, ಜಿಲ್ಲಾಧಿಕಾರಿಗಳು ಅರ್ಜಿದಾರರಿಗೆ ಪರ್ಯಾಯವಾಗಿ ಬೇರೆ ಯಾವುದಾದರೂ ಸೂಕ್ತ ಮೈದಾನವನ್ನು ಒದಗಿಸಬೇಕು ಎಂದೂ ನ್ಯಾಯಾಲಯ ಆದೇಶಿಸಿದೆ.

ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪಣಕ್ಕಿಡುವ ಯಾವುದೇ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ತನ್ನ ಸದಸ್ಯರಿಗೆ ಅಗತ್ಯ ಸೂಚನೆಗಳನ್ನು ನೀಡುವ ಮೂಲಕ ಕಾಳಜಿ ವಹಿಸುವಂತೆ ನ್ಯಾಯಾಲಯವು ಅರ್ಜಿದಾರರಿಗೆ ತಿಳಿಸಿದೆ.

ಅಕ್ಟೋಬರ್ 19ರಂದು ಡಿಸಿ ಅನುಮತಿ ನಿರಾಕರಿಸಿ ನೀಡಿರುವ ಅನುಮೋದನೆಯನ್ನು ಪ್ರಶ್ನಿಸಿ ಒಕ್ಕುಟದ ಅಧ್ಯಕ್ಷ ಶ್ರೀರಾಮೇಗೌಡ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.