ಕಲಬುರಗಿ: ಒಂದೇ ಬೈಕ್ ನಲ್ಲಿ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ನೇಪಾಳದ ಐವರ ದುರ್ಮರಣ
ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ.

ಕಲಬುರಗಿ: ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂದೇ ಬೈಕ್ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು.
ಎದುರಿಗೆ ಬರುತ್ತಿದ್ದ ಲಾರಿ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತರು ಅಫಜಲಪೂರನಲ್ಲಿ ಫಾಸ್ಟ್ ಫುಡ್ ಹೋಟೆಲ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


