ಅಪಹರಣಕ್ಕೊಳಗಾಗಿದ್ದ ಬೆಂಗಳೂರಿನ ಪಿಯು ವಿದ್ಯಾರ್ಥಿ ಅರಕಲಗೂಡು ಬಳಿ ರಕ್ಷಣೆ
ಬೆಂಗಳೂರಿನ ನಾಗಾರ್ಜುನ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಚಿರಾಗ್(21)ನನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ.

ಹಾಸನ: ಬೆಂಗಳೂರಿನ ನಾಗಾರ್ಜುನ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಚಿರಾಗ್(21)ನನ್ನು ಅಪಹರಿಸಿದ್ದ ನಾಲ್ವರು ದುಷ್ಕರ್ಮಿಗಳು ಬುಧವಾರ ಹಾಸನದ ಅರಕಲಗೂಡು ಬಳಿ ಬಿಟ್ಟು ಹೋಗಿದ್ದಾರೆ.
ಬೆಂಗಳೂರಿನ ಯಲಹಂಕ ಪೊಲೀಸ್ ವ್ಯಾಪ್ತಿಯ ಅನಂತಪುರ ಎಕ್ಸ್‌ಟೆನ್ಶನ್‌ನ ಕೃಷ್ಣೇಗೌಡರ ಪುತ್ರ ಚಿರಾಗ್‌ನನ್ನು ದುಷ್ಕರ್ಮಿಗಳು ಅಪಹರಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಚಿರಾಗ್ ಕಾಲೇಜಿಗೆ ಹೋಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ನಾಲ್ವರು ಅಪರಿಚಿತರು ಕಾರಿನಲ್ಲಿ ಕರೆದೊಯ್ದಿದ್ದಾರೆ. ಅರಕಲಗೂಡು ಸಮೀಪದ ಶನಿವಾರಸಂತೆ ರಸ್ತೆಯಲ್ಲಿ ಮರದ ಕೆಳಗೆ ಕುಳಿತಿದ್ದ ಚಿರಾಗ್ ಫೋನ್ ಮಾಡಿದ ನಂತರ ಅರಕಲಗೂಡು ಪೊಲೀಸರು ರಕ್ಷಿಸಿದ್ದಾರೆ.
ಚಿರಾಗ್ ದಾರಿಹೋಕನ ಫೋನ್ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಚಿರಾಗ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಪಹರಣಕಾರರು ಕೆಲವು ರಾಸಾಯನಿಕಗಳನ್ನು ಸಿಂಪಡಿಸಿದ ನಂತರ ಚಿರಾಗ್‌ನನ್ನು ಕಾರಿನಲ್ಲಿ ಕರೆದೊಯ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


