ರಾಜ್ಯ

ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಬಾಗಲಕೋಟೆ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಬಾಗಲಕೋಟೆ ವ್ಯಕ್ತಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿ ನಿವಾಸಿ ಶ್ರೀಕಾಂತ್  ತಪ್ಪಿತಸ್ಥರೆಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ-II (ಪೋಕ್ಸೊ) ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ಸಂತ್ರಸ್ತೆ ತನ್ನ ಪೋಷಕರೊಂದಿಗೆ ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯ ಶೆಡ್‌ನಲ್ಲಿ ನೆಲೆಸಿದ್ದಳು. ಆರೋಪಿ ಸಂತ್ರಸ್ತೆಯ ಪಕ್ಕದ ಶೆಡ್‌ನಲ್ಲಿ ವಾಸವಾಗಿದ್ದ. ಸಂತ್ರಸ್ತೆಯ ಪೋಷಕರು ಮನೆಯಿಂದ ದೂರ ಇದ್ದಾಗ ಆರೋಪಿ ಪ್ರೀತಿಸುವ ನೆಪದಲ್ಲಿ ಸಂತ್ರಸ್ತೆಯನ್ನು ಮನವೊಲಿಸಿದ್ದು,  ಏಪ್ರಿಲ್ 12, 2019 ರಿಂದ ಹಲವಾರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. 

 ಸಂತ್ರಸ್ತೆಯ ಫೋಟೋಗಳನ್ನು ತೆಗೆದುಕೊಂಡಿದ್ದ ಆರೋಪಿ, ಯಾರಿಗಾದರೂ ವಿಷಯ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.  ಶಾಲೆಯಲ್ಲಿ ಅಸ್ವಸ್ಥಳಾಗಿ ಬಿದ್ದಿದ್ದ ಸಂತ್ರಸ್ತೆಗೆ  ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿಯಾಗಿದ್ದು, ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಎಸಿಪಿ ಶ್ರೀನಿವಾಸ್ ಗೌಡ ಹಾಗೂ ಎಸಿಪಿ ಕೆ ಯು ಬೆಳ್ಳಿಯಪ್ಪ ಪ್ರಾಥಮಿಕ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿದ ನ್ಯಾಯಾಲಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n), 376(3) ಮತ್ತು 506 ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿತು. ಸಂತ್ರಸ್ತ ಮಹಿಳೆಗೆ 10.50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು. ಸಂತ್ರಸ್ತೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ಮತ್ತು ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.