ಗಣೇಶ ಕಾಲ್ಪನಿಕ ದೇವರು- ಗಣಪತಿ ಪೂಜೆ ನಮ್ಮ ಸಂಸ್ಕೃತಿಯಲ್ಲ, ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ
ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’

ಚಿತ್ರದುರ್ಗ: ವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕು’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯಲ್ಲಿ ಗುರುವಾರದಿಂದ ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ವಚನ ಪ್ರಸ್ತುತ ಪಡಿಸುವುದು ನಿಜವಾದ ಪ್ರಾರ್ಥನೆ. ಶಿವಕುಮಾರ ಸ್ವಾಮೀಜಿ ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನು ಹಾಡಬಹುದು ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ, ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಶ್ಲೋಕ ಪಠಸಬೇಕು ಎಂಬುದು ಹಲವರ ನಂಬಿಕೆಯಾಗಿದ್ದು, ಅದರ ಬದಲು ವಚನಗಳನ್ನು ಪ್ರಾರ್ಥನೆಯಂತೆ ಪಠಿಸಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


