ಭಾನುವಾರ ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತ!
ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.

ಬೆಂಗಳೂರು: ನವೆಂಬರ್ 5 ಭಾನುವಾರದಂದು ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಭಾಗಶ: ಸ್ಥಗಿತವಾಗಲಿದೆ.
ಹೌದು. ಅಂದು ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.
ಬೆಳಗ್ಗೆ 9 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ತಿಳಿಸಿದೆ.
ಚಲ್ಲಘಟ್ಟ ಮತ್ತು ಎಂ.ಜಿ. ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲು ಸೇವೆ ಬೆಳಗ್ಗೆ 7 ಗಂಟೆಯಿಂದಲೇ ವೇಳಾಪಟ್ಟಿ ಪ್ರಕಾರ ಪ್ರಾರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


