ಕೋಲಾರ: ಶಾಲಾ ಆವರಣದಲ್ಲಿ 17 ವರ್ಷದ ಬಾಲಕನ ಬರ್ಬರ ಹತ್ಯೆ
17 ವರ್ಷದ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕೋಲಾರ: 17 ವರ್ಷದ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಶುಕ್ರವಾರ ಸಂಜೆ 7.30ರ ಸುಮಾರಿಗೆ ಪಿ.ಸಿ (ಪೇಟೆ ಚಾಮನಹಳ್ಳಿ) ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕನ ಬರ್ಬರ ಹತ್ಯೆ ನಡೆದಿದೆ.
ಪಿ.ಸಿ ಬಡಾವಣೆಯ ನಿವಾಸಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಅರುಣ್ ಸಿಂಗ್ ಎಂಬವರ ಮಗ ಕಾರ್ತಿಕ್ ಸಿಂಗ್ ಕೊಲೆಯಾದ ಬಾಲಕನಾಗಿದ್ದಾನೆ. ಕೋಲಾರದ ಎಸ್.ಡಿ.ಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್, ನಿನ್ನೆ ಬೆಳಗ್ಗೆಯಿಂದ ಹೊಟ್ಟೆ ನೋವು ಎನ್ನುವ ಕಾರಣಕ್ಕೆ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದನಂತೆ. ಸಂಜೆ ವೇಳೆ ಯಾರೋ ಸ್ನೇಹಿತರು ಕರೆ ಮಾಡಿ ಬಾ ಅಂದಿದ್ದಾರೆ. ಹಾಗಾಗಿ 5.30ರ ಸುಮಾರಿಗೆ ಕಾರ್ತಿಕ್ ಮನೆಯಿಂದ ಹೊರ ಹೋಗಿದ್ದಾನೆ. ಸುಮಾರು 7 ಗಂಟೆ ಸುಮಾರಿಗೆ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ.
ಎಲ್ಲೋ ಹೋಗಿರಬೇಕು, ಬರ್ತಾನೆ ಎಂದುಕೊಂಡು ಮನೆಯವರು ಕೂಡ ಸುಮ್ಮನಾಗಿದ್ದರು. ಆದರೆ, ಸುಮಾರು 9 ಗಂಟೆಗೆ ವ್ಯಕ್ತಿಯೊಬ್ಬರು, ನಿಮ್ಮ ಮಗನನ್ನು ಹೊಡೆದು ಹಾಕಿ ಕೊಲೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಕೂಡಲೇ ಶಾಲೆ ಬಳಿ ಬಂದ ಕುಟುಂಬಸ್ಥರು ಕಾರ್ತಿಕ್ ಕೊಲೆಯಾಗಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಘಟನೆ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಬಿ.ಆರ್.ರವಿಕಾಂತೇಗೌಡ ಅವರು, ಹಳೆ ದ್ವೇಷವೇ ಕೊಲೆಗೆ ಕಾರಣ ಎಂದು ಹೇಳಿದ್ದಾರೆ.
ಹತ್ಯೆಗೂ ಕೆಲ ತಿಂಗಳ ಹಿಂದೆ ಆರೋಪಿಗಳು ಕಾರ್ತಿಕ್ ಸಿಂಗ್ ಹಾಗೂ ಕಾಲೇಜಿನ ಇತರೆ ವಿದ್ಯಾರ್ಥಿಗಳಿಗೂ ಕಿರುಕುಳ ನೀಡಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.
ಆರೋಪಿ ಹಾಗೂ ಆತನ ಗೆಳೆಯರ ಪತ್ತೆಯಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳು ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದ್ದು, ತಂಡವನ್ನು ತಮಿಳುನಾಡಿಗೆ ಕಳುಹಿಸಲಾಗಿದೆ ಎಂದು ಕೋಲಾರ ಎಸ್'ಪಿ ನಾರಾಯಣ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


