ಚುನಾವಣೆಗೂ ಮುನ್ನ ಬಿಜೆಪಿ ಯಾರನ್ನೂ ಹತ್ಯೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆ: ಸಚಿವ ಮಂಕಾಳ ವೈದ್ಯ
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಯಾರನ್ನೂ ಕೊಲೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆಂದು ಸಚಿವ ಮಂಕಾಳ್ ವೈದ್ಯ ಶನಿವಾರ ಹೇಳಿದ್ದಾರೆ.

ಕಾರವಾರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಯಾರನ್ನೂ ಕೊಲೆ ಮಾಡುವುದಿಲ್ಲ ಎಂಬ ನಂಬಿಕೆಯಲ್ಲಿದ್ದೇನೆಂದು ಸಚಿವ ಮಂಕಾಳ್ ವೈದ್ಯ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರು ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಾರೆಂಬ ಭಯವಿದೆ. ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೆ ಬಿಜೆಪಿ ಸತ್ಯವಂತರಾಗಿರುವ ಉದಾಹರಣೆ ಇದೆಯೇ’ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ 2018ರ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ಪರೇಶ್ ಮೇಸ್ತಾ ಹತ್ಯೆಯನ್ನು ಪರೋಕ್ಷವಾಗಿ ಉಲ್ಲೇಖಿಸಿದರು.
ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಬಾರದು ಎಂಬ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ತಮ್ಮ ಪಕ್ಷದಲ್ಲಿ ನಾಯಕರಿಲ್ಲ ಎಂಬುದನ್ನು ಈಶ್ವರಪ್ಪ ಅರ್ಥಮಾಡಿಕೊಳ್ಳಲಿ. ವಿಧಾನಸಭೆಯಲ್ಲಿಯೂ ವಿರೋಧ ಪಕ್ಷದ ನಾಯಕರೇ ಇಲ್ಲ. ಅವರು ನಮ್ಮ ಬಗ್ಗೆ ಮಾತನಾಡುವಷ್ಟು ಅರ್ಹರಲ್ಲ ಎಂದು ಹೇಳಿದರು.
15 ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ವಿಚಾರ ಕುರಿತು ಮಾತನಾಡಿ, ಪಕ್ಷದ ಕಾರ್ಯಕರ್ತರು ಮತ್ತು ಸಚಿವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿಗಳು ನಮ್ಮನ್ನು ಆಹ್ವಾನಿಸಿದ್ದರು. ನಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದೆವು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


