MSIL ಚಿಟ್ ಫಂಡ್ ನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರದ ಚಿಂತನೆ
ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.

ಬೆಂಗಳೂರು: ಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ.
ಪ್ರತಿ ಕುಟುಂಬ ಪ್ರತಿ ತಿಂಗಳು ಅಂದಾಜು ರೂ, 4,000 ರಿಂದ 5,000 ಹಣಕಾಸು ನೆರವು ಪಡೆಯುತ್ತಿದ್ದು, ಜನರಲ್ಲಿ ಉಳಿತಾಯ ಮನೋಭಾವ ಬೆಳೆಸಿ ಆರ್ಥಿಕ ಪ್ರಗತಿ ಸಾಧನೆ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ 93 ಲಕ್ಷ ಮಹಿಳೆಯರು ಪ್ರತಿ ತಿಂಗಳು 2,000 ರೂ.ಪಡೆಯುತ್ತಿದ್ದು, ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದಲೂ ಹಣವನ್ನು ಉಳಿಸುತ್ತಿದ್ದಾರೆ. ಈ ಮಹಿಳೆಯರು ಉಳಿತಾಯ ಆರಂಭಿಸುವಂತೆ ಯೋಜನೆ ರೂಪಿಸಲಾಗಿದೆ.
ಇದಕ್ಕಾಗಿ, 305 ಕೋಟಿ ರೂಪಾಯಿ ವಹಿವಾಟು ಮತ್ತು 22,000 ಕಡಿಮೆ ಚಂದಾದಾರರನ್ನು ಹೊಂದಿರುವ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ನಡೆಸುತ್ತಿರುವ ಚಿಟ್ ಫಂಡ್ ವ್ಯವಹಾರವನ್ನು ವಿಸ್ತರಿಸಲು ಮುಂದಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್, ಎಂಎಸ್ ಐಎಲ್ ಭಾರತದ ಪ್ರಮುಖ ಚಿಟ್ ಫಂಡ್ ಮಾಡುವ ಮೂಲಕ ಚಿಟ್ ಫಂಡ್ ವಲಯವನ್ನು ಉನ್ನತ ಸ್ಥಾನಕ್ಕೆ ಒಯ್ಯಲು ಕರ್ನಾಟಕವು ಮಹತ್ತರ ಪ್ರಯಾಣ ಆರಂಭಿಸುತ್ತಿದೆ.ಎಂಎಸ್ ಐಎಲ್ ವಿಶ್ವಾಸಾರ್ಹ ಬ್ರ್ಯಾಂಡ್, ಸುಭದ್ರ, ಸುರಕ್ಷಿತ ಮತ್ತು ಪ್ರಗತಿ ವರ್ಧಕ, AI ಪ್ಲಾಟ್ ಫಾರ್ಮ್ ನಲ್ಲಿ ಇರಲಿದೆ ಕೆಲವೇ ವರ್ಷಗಳಲ್ಲಿ ರೂ. 300 ಕೋಟಿಯಿಂದ 10,000 ಕೋಟಿ ವಹಿವಾಟು ತಲುಪುವ ಗುರಿ ಹೊಂದಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


