ಸಮಯಕ್ಕೆ ಸರಿಯಾಗಿ ಪರಿಹಾರ ಒದಗಿಸುವುದು ಕೇಂದ್ರ ಸರ್ಕಾರದ ಕರ್ತವ್ಯ: ಸಿಎಂ ಸಿದ್ದರಾಮಯ್ಯ
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಪ್ರಸ್ತಾವನೆ ಪರಿಗಣಿಸಿ ಅನುದಾನ ಬಿಡುಗಡೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯ...

ಹಾಸನ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಪ್ರಸ್ತಾವನೆ ಪರಿಗಣಿಸಿ ಅನುದಾನ ಬಿಡುಗಡೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಬುಧವಾರ ಹೇಳಿದ್ದಾರೆ.
ಹಾಸನಾಂಬ ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕೇಂದ್ರ ಸಹ ರಾಜ್ಯಗಳಿಗೆ ಸಹಕಾರ ನೀಡಬೇಕು. ರಾಜ್ಯಗಳು ಜನರ ತೆರಿಗೆ ಹಣವನ್ನು ಕೇಂದ್ರಕ್ಕೆ ಕಟ್ಟಿರುತ್ತವೆ. ಸಮಯಕ್ಕೆ ಸರಿಯಾಗಿ ಪರಿಹಾರ ಒದಗಿಸುವುದು ಕೇಂದ್ರದ ಕರ್ತವ್ಯ ಎಂದರು.
ಕೇಂದ್ರ ಸರ್ಕಾರ, ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(ಎನ್‌ಡಿಆರ್‌ಎಫ್) ಅಡಿಯಲ್ಲಿ ರಾಜ್ಯಗಳಿಗೆ ಇನ್‌ಪುಟ್ ಸಬ್ಸಿಡಿ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ 17901 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಿದೆ. ಕೇಂದ್ರ ತಂಡ ಭೇಟಿ ನೀಡಿ ಸಮೀಕ್ಷೆ ನಡೆಸಿದ್ದರೂ ಕೇಂದ್ರ ಇನ್ನೂ ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಿಡಿ ಕಾರಿದರು.
ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ಜವಾಬ್ದಾರಿ ಪ್ರಶ್ನಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಜೆಡಿಎಸ್ ಎನ್‌ಡಿಎ ಭಾಗವಾಗಿರುವುದರಿಂದ ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬಹುದು ಎಂದರು.
ನಂತರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, ಗೃಹಜ್ಯೋತಿ, ಭಾಗ್ಯಲಕ್ಷ್ಮಿ ಸೇರಿದಂತೆ ಹೊಸ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಶೇ.100 ರಷ್ಟು ಅನುಷ್ಠಾನಗೊಳಿಸಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಜಿಪಂ, ಸಿಇಒ, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


