ಪೇಜಾವರ ಸ್ವಾಮೀಜಿಗೆ ಪಿತೃ ವಿಯೋಗ: ಅಂಗಡಿಮಾರು ಕೃಷ್ಣ ಭಟ್ ನಿಧನ
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ, ಅಂಗಡಿಮಾರ್ ಕೃಷ್ಣ ಭಟ್ (105) ಅವರು ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಉಡುಪಿ: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ, ಅಂಗಡಿಮಾರ್ ಕೃಷ್ಣ ಭಟ್ (105) ಅವರು ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ.
ಕೃಷ್ಣ ಭಟ್ ಅವರು ಕಟೀಲು, ಪುನರೂರು ಮತ್ತು ಪಾವಂಜೆಯ ವಿವಿಧ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡಿ ನಾಲ್ಕು ವೇದಗಳಲ್ಲಿ ಪರಿಣತರಾಗಿದ್ದರು. ಭಟ್ ಅವರು ಋಗ್, ಯಜುರ್, ಸಾಮ ಮತ್ತು ಅಥರ್ವಣ ವೇದಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು.
ಸಾಂಪ್ರದಾಯಿಕ ಕೃಷಿಕ ಮತ್ತು ಆಧ್ಯಾತ್ಮಿಕ ವಿದ್ವಾಂಸರಾದ ಭಟ್ ಅವರು ತುಳು ಲಿಪಿಯ ಪ್ರತಿಪಾದಕರಾಗಿದ್ದರು ಮತ್ತು ತುಳುವ ಸಂಪ್ರದಾಯಗಳ ಪಂಚಾಂಗವನ್ನು ಪರಿಚಯಿಸಿದರು. ಅವರು ಹಲವಾರು ಯಾಗಗಳನ್ನು ಮಾಡಿದರು. ಹೆಚ್ಚಿನ ಸಂಖ್ಯೆಯ ಶಿಷ್ಯರಿಗೆ ಸಂಸ್ಕೃತ ಕಲಿಸಿದರು. ಭಟ್ ಅವರು ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ಮತ್ತು ಕನ್ಯಾಕುಮಾರಿ ದೇವಸ್ಥಾನದಲ್ಲಿ ಅರ್ಚಕರಾಗಿ ಸಹ ಸೇವೆ ಸಲ್ಲಿಸಿದ್ದರು.
ಕೃಷ್ಣ ಭಟ್ ಅವರು ಕನ್ನಡ ಮತ್ತು ತುಳು ಭಾಷೆಗಳಲ್ಲಿ ‘ಭಜನೆ’ ರಚಿಸಿದ್ದರು. ಪ್ರಾರ್ಥನಾ ಗೀತೆಗಳನ್ನೂ ಬರೆದಿದ್ದರು. ಅವರ ಪತ್ನಿ ಯಮುನಾ ಭಟ್ ದಶಕಗಳ ಹಿಂದೆ ನಿಧನರಾಗಿದ್ದರು. ಶ್ರೀ ವಿಶ್ವಪ್ರಸನ್ನ ತೀರ್ಥರು ಅವರ ಎಂಟನೆಯ ಮಗ. ಕೃಷ್ಣ ಭಟ್ ಅವರು ಐವರು ಪುತ್ರರು (ಪೇಜಾವರ ಶ್ರೀಗಳು ಸೇರಿದಂತೆ) ಮತ್ತು ಏಳು ಪುತ್ರಿಯರನ್ನು ಅಗಲಿದ್ದಾರೆ.
ಕೃಷ್ಣ ಭಟ್ ಅವರಿಗೆ ವಿವಿಧ ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದವು. ಭಟ್ ಅವರು ಉಡುಪಿ ಶ್ರೀಕೃಷ್ಣಮಠದ ‘ಕೃಷ್ಣಾನುಗ್ರಹ ಪ್ರಶಸ್ತಿ’ ಹಾಗೂ ಕಲ್ಕೂರ ಪ್ರತಿಷ್ಠಾನದ ‘ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ’ಗೆ ಭಾಜನರಾಗಿದ್ದರು. ಕೃಷ್ಣ ಭಟ್ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


