ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ: ಶುಕ್ರವಾರ 'ಸುಪ್ರೀಂ' ನಲ್ಲಿ ಸಿಬಿಐ ಅರ್ಜಿ ವಿಚಾರಣೆ
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಸಿಬಿಐ ಪರ ವಾದ ಮಂಡಿಸಿದ ಎಎಸ್‌ಜಿ ಎಸ್‌ವಿ ರಾಜು ನ್ಯಾಯಾಲಯಕ್ಕೆ ತಿಳಿಸಿದರು. ಶಿವಕುಮಾರ್ ಅವರ ವಿಚಾರಣೆ ನಡೆಸದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ಈ ಹಿಂದೆ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತ್ತು.
ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಉತ್ತರ ನೀಡಲು ಕೊಂಚ ಕಾಲಾವಕಾಶ ಕೋರಿದರು. ನ್ಯಾಯಾಲಯ ಶುಕ್ರವಾರ ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಲಿದೆ. ಈ ಪ್ರಕರಣ ಸಂಬಂಧ ಜೂನ್‌ನಲ್ಲಿ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿತ್ತು. ನಂತರ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತೆರವು ಮಾಡಲು ಅಕ್ಟೋಬರ್ 17 ರಂದು ನ್ಯಾಯಾಲಯ ನಿರಾಕರಿಸಿತ್ತು. ಆದರೆ ನ್ಯಾಯಾಲಯದ ಆದೇಶದ ವಿರುದ್ಧ ಸಿಬಿಐ ಮಾಡಿದ ಮೇಲ್ಮನವಿಯ ಬಗ್ಗೆ ಅವರ ಪ್ರತಿಕ್ರಿಯೆಯನ್ನು ಕೇಳಿತು.
ಏಪ್ರಿಲ್ 2013 ರಿಂದ ಏಪ್ರಿಲ್ 2018 ರ ನಡುವೆ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಸ್ವಾಧೀನಕ್ಕೆ ಪಡೆಯಲಾದ ಒಟ್ಟು ಮೌಲ್ಯವು 128 ಕೋಟಿಯಿಂದ 162 ಕೋಟಿಗೆ ಏರಿಕೆಯಾಗಿದೆ. ಇದು ಸುಮಾರು ಶೇ. 45 ಅಥವಾ ರೂ. 75 ಕೋಟಿಯಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


