ತಿರುಚಿದ ವಿಡಿಯೋ ಮೂಲಕ ಬಿಜೆಪಿ ನಾಯಕಿಗೆ ಬ್ಲ್ಯಾಕ್‌ಮೇಲ್ ಆರೋಪ; ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು
ತಿರುಚಿದ ವಿಡಿಯೋ ಮೂಲಕ ಬಿಜೆಪಿ ನಾಯಕಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಪತ್ರಕರ್ತರೊಬ್ಬರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಬಾಗಲಕೋಟೆ: ತಿರುಚಿದ ವಿಡಿಯೋ ಮೂಲಕ ಬಿಜೆಪಿ ನಾಯಕಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಪತ್ರಕರ್ತರೊಬ್ಬರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ವಿಡಿಯೋ ಜರ್ನಲಿಸ್ಟ್ ಎಂದು ಹೇಳಿಕೊಳ್ಳುವ ಬಂಡೆ ನವಾಜ್ ಸರಕಾವಾಸ್ ಎಂಬಾತನ ವಿರುದ್ಧ ಸಂತ್ರಸ್ತೆ ಜಮಖಂಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆ ಜಮಖಂಡಿ ಪಟ್ಟಣದ ಬಿಜೆಪಿಯಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ ಮತ್ತು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯೂ ಆಗಿದ್ದಾರೆ.
ಆರೋಪಿ ಅಶ್ಲೀಲ ವಿಡಿಯೋದೊಂದಿಗೆ ಸಂತ್ರಸ್ತೆಯ ಮುಖವನ್ನು ಮಾರ್ಫಿಂಗ್ ಮಾಡಿದ್ದಾರೆ.
ಇದನ್ನೂ ಓದಿ: Deepfake: ರಶ್ಮಿಕಾ ಬಳಿಕ ಕತ್ರಿನಾ ಫೋಟೋ Morph!
ಬಿಜೆಪಿ ಮಹಿಳಾ ಕಾರ್ಯಕರ್ತೆಯ ಲೈಂಗಿಕ ಹಗರಣ ಎಂದು ಶೀರ್ಷಿಕೆ ನೀಡಿ, ಕನ್ನಡದ ಹಾಡನ್ನು ಸೇರಿಸಿದ್ದಾನೆ. ಆರೋಪಿ ನಂತರ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ತನ್ನನ್ನು ಭೇಟಿಯಾಗಿ ಹಣ ನೀಡುವಂತೆ ಒತ್ತಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣ ನೀಡಲು ಸಿದ್ಧರಿಲ್ಲದಿದ್ದರೆ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


