ರಾಜ್ಯ

ಸರ್ಕಾರದಿಂದ ಸೇಡಿನ ರಾಜಕಾರಣ ಖಂಡಿಸಿ ಮೂರು ದಿನ ಸತ್ಯಾಗ್ರಹ: ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಬಿ ಎಸ್ ಯಡಿಯೂರಪ್ಪ

ಕಳೆದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವು ಭಾಗಗಳಲ್ಲಿ ಅವಾಂತರ ಉಂಟಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಭಾರೀ ಸಮಸ್ಯೆಗಳು ಎದುರಾಗುತ್ತಿವೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಬಿಬಿಎಂಪಿ, ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಸರ್ಕಾರದಿಂದ ಸೇಡಿನ ರಾಜಕಾರಣ ಖಂಡಿಸಿ ಮೂರು ದಿನ ಸತ್ಯಾಗ್ರಹ: ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Published On :

ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಲವು ಭಾಗಗಳಲ್ಲಿ ಅವಾಂತರ ಉಂಟಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಭಾರೀ ಸಮಸ್ಯೆಗಳು ಎದುರಾಗುತ್ತಿವೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಬಿಬಿಎಂಪಿ, ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಬೆಂಗಳೂರಿನ ಮಳೆ ಅವಾಂತರ ಬಗ್ಗೆ ವಸ್ತು ಸ್ಥಿತಿ ಅರಿತು ಸರ್ಕಾರದ ಗಮನಕ್ಕೆ ತರಲೆಂದು ಇಂದು ಬುಧವಾರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದರು. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿ.ಎಸ್​.ಯಡಿಯೂರಪ್ಪ ರೌಂಡ್ಸ್ ಹಾಕಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ. ಹೊಸಕೆರೆಹಳ್ಳಿ ಭಾಗದಲ್ಲಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದರು. ಬಿಎಸ್​​ವೈಯವರಿಗೆ ಶಾಸಕರಾದ ಅಶ್ವತ್ಥ್ ನಾರಾಯಣ, ಮುನಿರತ್ನ ಸಾಥ್​​ ನೀಡಿದರು.

3 ದಿನ ಸತ್ಯಾಗ್ರಹ: ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರ್ ಆರ್ ನಗರದಲ್ಲಿ ಎಲ್ಲಾ ವ್ಯವಹಾರಗಳು ಸ್ಥಗಿತಗೊಂಡಿವೆ. ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ. ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ. ಮುನಿರತ್ನ ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ, ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಇದೆಲ್ಲವನ್ನೂ ಪ್ರತಿಭಟಿಸಿ ಸತ್ಯಾಗ್ರಹ ಮಾಡುತ್ತೇನೆ ಎಂದರು.

ತಮ್ಮ ಕ್ಷೇತ್ರಕ್ಕೆ ಸರ್ಕಾರ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದೆ, ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿ ಕಳೆದ ತಿಂಗಳು ಕ್ಷೇತ್ರದ ಶಾಸಕ ಮುನಿರತ್ನ ವಿಧಾನ ಸೌಧ ಮುಂದೆ ಸತ್ಯಾಗ್ರಹ ಕುಳಿತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.