ರಾಜ್ಯ

ಎಂಎಸ್ಇಝಡ್ ಯೋಜನೆ: ನಿರ್ವಸಿತರಿಗೆ ಉದ್ಯೋಗ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ

ಎಂಎಸ್ಇಝಡ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ನಿರ್ವಸಿತರಿಗೆ ಉದ್ಯೋಗ ನೀಡುವ ಮತ್ತು ಉದ್ಯೋಗದಲ್ಲಿ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಮಹತ್ವದ ವರ್ಚುಯಲ್ ಸಭೆ ನಡೆಯಿತು.

ಎಂಎಸ್ಇಝಡ್ ಯೋಜನೆ: ನಿರ್ವಸಿತರಿಗೆ ಉದ್ಯೋಗ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ
ದಿನೇಶ್ ಗುಂಡೂರಾವ್
Published On :

ಬೆಂಗಳೂರು: ಎಂಎಸ್ಇಝಡ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ನಿರ್ವಸಿತರಿಗೆ ಉದ್ಯೋಗ ನೀಡುವ ಮತ್ತು ಉದ್ಯೋಗದಲ್ಲಿ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಮಹತ್ವದ ವರ್ಚುಯಲ್ ಸಭೆ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಕಂಪನಿಗಳ ಹಾಗೂ ಹೋರಾಟ ಸಮಿತಿಯ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ಯೋಜನೆಗಾಗಿ ಭೂಮಿ ಕಳೆದುಕೊಂಡವರ ಉದ್ಯೋಗ ವಿಚಾರದಲ್ಲಿನ ಎಲ್ಲಾ ಗೊಂದಲಗಳನ್ನು ಡಿಸೆಂಬರ್ 01ನೇ ತಾರೀಖಿನ ಒಳಗಾಗಿ ಪರಿಹರಿಸಬೇಕು. ತಪ್ಪಿದ್ದಲ್ಲಿ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ. 
 
ಭೂಸ್ವಾಧೀನದ ಭಾಗವಾಗಿ ಭೂಮಿ ಕಳೆದುಕೊಂಡವರಿಗೆ ಕರ್ನಾಟಕ ಸರಕಾರವು ಉದ್ಯೋಗದ ಭರವಸೆ ನೀಡಿದೆ. ನೇಮಕಾತಿ ನಿಯಮಗಳನ್ನು ಮುಂದಿಟ್ಟು ಉದ್ಯೋಗ ನಿರಾಕರಿಸಲು ಸಾಧ್ಯವಿಲ್ಲ. ಎಂಆರ್‌ಪಿಎಲ್‌ ಮತ್ತು ಐಎಸ್‌ಪಿಆರ್‌ಎಲ್‌ ಸಂಸ್ಥೆಗಳು ಉದ್ಯೋಗ ನೀಡಿರುವ ರೀತಿಯನ್ನೇ ಜಿಎಂಪಿಎಲ್ ಅನುಸರಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.