ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಬಗ್ಗೆ ಸರ್ಕಾರದಲ್ಲಿ ಚರ್ಚೆ
ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ಯೋಜನೆಯ ಸಲಹಾ ಮತ್ತು ಫೆಸಿಲಿಟೇಷನ್ ಸಂಸ್ಥೆ ಯುರೋಪಿಯನ್ ಉದ್ಯಮ ಹಾಗೂ ತಂತ್ರಜ್ಞಾನ ಕೇಂದ್ರ (ಇಬಿಟಿಸಿ) ನ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಭಾಗಿಯಾಗಿದ್ದರು.
ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಯೋಜನೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ 6-8 ಪಥಗಳ ಹೈಸ್ಪೀಡ್ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಹೊಂದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗಳನ್ನು ಹೊಂದಿರುವ ದಿನೇಶ್ ಗುಂಡೂರಾವ್, ಕಾರಿಡಾರ್ ಮಾರ್ಗ ನಕ್ಷೆಯನ್ನು ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು.
ಮಂಗಳೂರಿನ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗುವ ಇಂತಹ ಯೋಜನೆಗಳಿಗೆ ರಾಜ್ಯ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿರುವ ಸಚಿವರು, ಈ ರೀತಿಯ ಉದ್ಯಮಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


