ಕಲಬುರಗಿ: ಸ್ನೇಹಿತನ ಅಪ್ರಾಪ್ತ ಮಗಳನ್ನು ಅಪಹರಿಸಿ ಅತ್ಯಾಚಾರ, ವ್ಯಕ್ತಿಗೆ 20 ವರ್ಷಗಳ ಜೈಲು ಶಿಕ್ಷೆ
2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೊಕ್ಸೊ ನ್ಯಾಯಾಲಯ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಾಂತವೀರ್ ಬಿ ತುಪ್ಪದ್ ತಿಳಿಸಿದ್ದಾರೆ.

ಕಲಬುರಗಿ: 2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೊಕ್ಸೊ ನ್ಯಾಯಾಲಯ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಾಂತವೀರ್ ಬಿ ತುಪ್ಪದ್ ತಿಳಿಸಿದ್ದಾರೆ.
ಶುಕ್ರವಾರ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಆರೋಪಿ ಗಂಗಾಧರ ಶರಣಬಸಪ್ಪ ನೀಲಹಳ್ಳಿ 2021ರ ಸೆಪ್ಟಂಬರ್ 24ರಂದು ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಲಬುರಗಿಯ ರಾಮಮಂದಿರದ ಬಳಿ ಅಪಹರಿಸಿ, ಕೋಲಾರ ಜಿಲ್ಲೆಯ ಕರಿನಾಯಕನಹಳ್ಳಿಗೆ ಕರೆದೊಯ್ದಿದ್ದ. ತಾನು ತಂಗಿದ್ದ ಬಾಡಿಗೆ ಮನೆಗೆ ಕರೆದೊಯ್ದು 2021ರ ಸೆಪ್ಟೆಂಬರ್ 25ರಿಂದ ನವೆಂಬರ್ 25ರವರೆಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಳಿಕ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ತನ್ನ ಹುಟ್ಟೂರಾದ ಕಲಬುರಗಿ ಜಿಲ್ಲೆಯ ಮದ್ಬೂಳ ಗ್ರಾಮಕ್ಕೆ ಬಂದು ಪೋಷಕರಿಗೆ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಬಳಿಕ, ಆರೋಪಿಯು ಸಂತ್ರಸ್ತೆಯ ತಂದೆಯ ಸ್ನೇಹಿತನಾಗಿದ್ದು, ಆತ ನಾಲ್ಕು ವರ್ಷಗಳಿಂದ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ.
ಗಂಗಾಧರ್ ವಿರುದ್ಧ ಪೋಷಕರು ಮದ್ಬೂಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖಾಧಿಕಾರಿಯಾಗಿದ್ದ ಕಾಳಗಿ ವೃತ್ತದ ಅಂದಿನ ಪೊಲೀಸ್ ನಿರೀಕ್ಷಕ ವಿನಾಯಕ್ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


