ಧಾರವಾಡ: ಪಟಾಕಿ ತರಲು ಹೋಗಿದ್ದ ಯುವಕರು ರಸ್ತೆ ಅಪಘಾತಕ್ಕೆ ಬಲಿ
ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ.

ಧಾರವಾಡ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ.
ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸದ್ಯ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೂವರು ಯುವಕರು ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಬೈಕ್‌ನಲ್ಲಿ ನವಲಗುಂದದಿಂದ ಧಾರವಾಡಕ್ಕೆ ಬರುತ್ತಿದ್ದರು. ಈ ವೇಳೆ ಬೈಕ್ ಹಾಗೂ ಕ್ರೂಸರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


