ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ನೃತ್ಯದ ವಿಡಿಯೋ ತಿರುಚಿದ ದುಷ್ಕರ್ಮಿಗಳು, ಎಫ್‌ಐಆರ್ ದಾಖಲು
ಕಾಂಗ್ರೆಸ್ ಕಾರ್ಯಕರ್ತೆಯರ ಸಂಭ್ರಮಾಚರಣೆ ಮತ್ತು ನೃತ್ಯದ ವಿಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ಸಂಭ್ರಮಾಚರಣೆ ಮತ್ತು ನೃತ್ಯದ ವಿಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಪಕ್ಷದ ಹಿರಿಯ ಕಾರ್ಯಕರ್ತೆ ಆಯೇಷಾ ಸನದಿ ಬೆಳಗಾವಿ ನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಐದು ತಿಂಗಳ ಹಿಂದಷ್ಟೇ ಉಚಿತ ಬಸ್ ಪ್ರಯಾಣಕ್ಕೆ ಅನುಕೂಲವಾಗುವ ಶಕ್ತಿ ಯೋಜನೆಯ ಉದ್ಘಾಟನೆ ಸಮಯದಲ್ಲಿ ಸನದಿ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತೆಯರು ಸರ್ಕಾರಿ ಸ್ವಾಮ್ಯದ ಬಸ್‌ನಲ್ಲಿ ನೃತ್ಯ ಮಾಡಿದ್ದರು.
ಆಗ ವಿಡಿಯೋ ವೈರಲ್ ಆಗಿತ್ತು. ದುಷ್ಕರ್ಮಿಗಳು ಈ ವಿಡಿಯೋವನ್ನು ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿ ಕನ್ನಡ ಸಿನಿಮಾವೊಂದರ ದೃಶ್ಯವನ್ನು ಸೇರಿಸಿ ಮಾರ್ಫಿಂಗ್ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತೆಯರನ್ನು ಕೆಟ್ಟದಾಗಿ ಚಿತ್ರಿಸಿದ್ದಾರೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕಾರ್ಯಕರ್ತೆಯರು ಆರೋಪಿಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


