ಮಂಗಳೂರು: ಕಟ್ಟಡದ ಮೇಲಿನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 20 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದರು.

ಮಂಗಳೂರು: ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 20 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದರು.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅವರು ಹೇಳಿದರು.
ಆಕೆಯ ಹಾಸ್ಟೆಲ್ ಕೊಠಡಿಯಿಂದ ಪೊಲೀಸರು ಡೆತ್ ನೋಟ್ ವಶಪಡಿಸಿಕೊಂಡಿದ್ದು, ಅದರಲ್ಲಿ ಆಕೆ ತನ್ನ ಜೀವನದಲ್ಲಿ ಹತಾಶಳಾಗಿರುವುದಾಗಿ ತಿಳಿಸಿದ್ದಾಳೆ.
ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


