ಚನ್ನಪಟ್ಟಣದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್; ತಂದೆ-ಮಗ ಸಾವು
ರಾಮನಗರ ಜಿಲ್ಲೆಯಲ್ಲಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ರಾಮನಗರ: ಜಿಲ್ಲೆಯಲ್ಲಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತರನ್ನು ಸಿದ್ದಪ್ಪ (65) ಮತ್ತು ಅರುಣ್ (23) ಎಂದು ಗುರುತಿಸಲಾಗಿದೆ. ತಂದೆ-ಮಗ ಎನ್ನಲಾಗಿದೆ.
ಮೂಲಗಳ ಪ್ರಕಾರ, ಚನ್ನಪಟ್ಟಣಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


