ಬೆಂಗಳೂರು ಕಂಬಳ: ಐಶ್ವರ್ಯ ರೈ, ಅನುಷ್ಕಾ ಶೆಟ್ಟಿ ಭಾಗಿ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕಂಬಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್ ಶೆಟ್ಟಿ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಕಂಬಲಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್ ಶೆಟ್ಟಿ ಅವರು ಹೇಳಿದ್ದಾರೆ.
ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಪ್ರಕಾಶ್ ಶೆಟ್ಟಿ ಅವರು ಮಾತನಾಡಿದರು.
ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದು ಹೇಳಿದರು.
ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ತಿಳಿಸಿದರು.
ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ಮಾತನಾಡಿ, ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ, ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.
ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: 'ಬೆಂಗಳೂರು ಕಂಬಳ'ಕ್ಕೆ ಭರದ ಸಿದ್ಧತೆ: ಸರ್ಕಾರದಿಂದ 1 ಕೋಟಿ ರೂ. ಆರ್ಥಿಕ ನೆರವು- ಡಿಸಿಎಂ ಡಿ.ಕೆ.ಶಿವಕುಮಾರ್
ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಮಾತನಾಡಿ, ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 'ಬೆಂಗಳೂರು ಕಂಬಳ ನಮ್ಮ ಕಂಬಳ' ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


