2023ರ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ: ಮುಂದಿನ ವರ್ಷದ ದರ್ಶನಕ್ಕೆ ದಿನಾಂಕ ನಿಗದಿ!
ಪ್ರಸಕ್ತ ಸಾಲಿನ ಶಕ್ತಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಉತ್ಸವವು ಬುಧವಾರ ವಿದ್ಯುಕ್ತವಾಗಿ ತೆರೆ ಕಂಡಿದೆ.

ಹಾಸನ: ಪ್ರಸಕ್ತ ಸಾಲಿನ ಶಕ್ತಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಉತ್ಸವವು ಬುಧವಾರ ವಿದ್ಯುಕ್ತವಾಗಿ ತೆರೆ ಕಂಡಿದೆ.
ಇಂದು ಮಧ್ಯಾಹ್ನ 12.23ಕ್ಕೆ ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗಿದೆ.
ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಸಲ್ಲಿಸಿ, ಗರ್ಭಗುಡಿಯಿಂದ ಅರ್ಚಕರು, ಅಧಿಕಾರಿಗಳು ಹೊರಬಂದು ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿ ಬೀಗ ಹಾಕಿದ್ದಾರೆ. ಮುಂದಿನ ವರ್ಷವೇ ಹಾಸನಾಂಬೆ ದೇಗುಲ ಓಪನ್ ಆಗಲಿದೆ.
ಪ್ರಸಕ್ತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನ ತೆರೆಯಲಾಗಿತ್ತು. ಆದರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ.
ಇದೀಗ ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.
ಪ್ರಸಕ್ತ ಸಾಲಿನಲ್ಲಿ ಒಟ್ಟು 12 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಮುಂದಿನ ವರ್ಷ 9 ದಿನ ಮಾತ್ರ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


