ಉತ್ತರ ಕನ್ನಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಆತ್ಮಹತ್ಯೆಯಿಂದ ನೊಂದು ಪ್ರಾಣಕಳೆದುಕೊಂಡ ತಾಯಿ-ಮಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು 50 ವರ್ಷದ ನರ್ಮದಾ ಮತ್ತು ಅವರ 25 ವರ್ಷದ ಮಗಳು ದಿವ್ಯಾ ಎಂದು ಗುರುತಿಸಲಾಗಿದೆ. ಶಿರಸಿ ತಾಲೂಕಿನ ತರಗೋಡು ಬೆಳಾಲೆ ಗ್ರಾಮದಲ್ಲಿ ಘಟನೆ ವರದಿಯಾಗಿದೆ.
ನರ್ಮದಾ ಅವರ 22 ವರ್ಷದ ಮಗ ಬಾಲಚಂದ್ರ ಹೆಗಡೆ ಅವರು ಕೋವಿಡ್ ಸಮಯದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು ಮತ್ತು ಕೋವಿಡ್ ನಂತರವೂ ಅವರು ಗುಣಮುಖರಾಗಿರಲಿಲ್ಲ. ನರ್ಮದಾ ಮತ್ತು ದಿವ್ಯಾ ಅವರ ಚಿಕಿತ್ಸೆಗಾಗಿ ದಿನನಿತ್ಯ ಓಡಾಡುತ್ತಿದ್ದರು.
ಬಾಲಚಂದ್ರ ಹೆಗಡೆ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಗ್ರಾಮಕ್ಕೆ ಬಂದು ಮನೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಮಂಗಳವಾರ ಬೆಳಗ್ಗೆ ಮನೆಯಲ್ಲಿ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬಾಲಚಂದ್ರ ಹೆಗಡೆ ಅವರ ಪಾರ್ಥಿವ ಶರೀರದ ಮುಂದೆ ರೋದಿಸುತ್ತಿದ್ದ ತಾಯಿ ಮತ್ತು ಮಗಳು ಮನೆಯೊಳಗೆ ಹೋಗಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


