ಟಿಕೆಟ್ ರಹಿತ ಪ್ರಯಾಣ: 7 ಲಕ್ಷ ರೂ ದಂಡ ವಸೂಲಿ ಮಾಡಿದ BMTC
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ದಂಡ ಹಾಕಿದ್ದು, ಈ ಮೊತ್ತ 7 ಲಕ್ಷ ರೂ ಗಳನ್ನು ದಾಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಬಸ್ ಗಳಲ್ಲಿ ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣಿಸುವ ಹಾಗೂ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳುವ ಪುರುಷರನ್ನು ಪತ್ತೆ ಹಚ್ಚಿ ದಂಡ ಹಾಕಿದ್ದು, ಈ ಮೊತ್ತ 7 ಲಕ್ಷ ರೂ ಗಳನ್ನು ದಾಡಿದೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳಿನಲ್ಲಿ ಒಟ್ಟು 6,99,325 ರೂ.ಗಳನ್ನು ದಂಡವಾಗಿ ವಸೂಲಿ ಮಾಡಲಾಗಿದೆ. ಬಸ್ ನಲ್ಲಿ ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 15,165 ಟ್ರಿಪ್‌ಗಳನ್ನು ತಪಾಸಣೆ ನಡೆಸಿವೆ.
ಸುಮಾರು 3350 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ 6,72,125ರೂ.ದಂಡ ವಸೂಲಿ ಮಾಡಿ, ಸಂಸ್ಥೆಯ ನಿರ್ವಾಹಕರ ವಿರುದ್ಧ 953 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 272 ಪುರುಷ ಪ್ರಯಾಣಿಕರಿಂದ ಒಟ್ಟು 27,200 ರೂ.ದಂಡ ವಿಧಿಸಲಾಗಿರುತ್ತದೆ. ಪ್ರಯಾಣಿಕರು ಬಿಎಂಟಿಸಿ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಸಂಸ್ಥೆಯು ಉತ್ತಮ ಸೇವೆಯನ್ನು ನೀಡಲು ಸಹಾಯವಾಗುತ್ತದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕು ಎಂದು ಪ್ರಯಾಣಿಕರಲ್ಲಿ ಸಂಸ್ಥೆಯು ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


