ದಕ್ಷಿಣ ಕನ್ನಡ: 5 ಮಂದಿ ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ!
ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್‌ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಿಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ: ಕೋಮು ಘರ್ಷಣೆ, ಹಸು ಸಾಗಾಟ, ನೈತಿಕ ಪೊಲೀಸ್‌ಗಿರಿ ಮತ್ತು ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಐವರು ಬಜರಂಗದಳದ ಕಾರ್ಯಕರ್ತರಿಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ಜಾರಿ ಮಾಡಿದ್ದಾರೆ.
ಅಲ್ಲದೆ, ಅವರನ್ನು ಬೇರೆ ಜಿಲ್ಲೆಗಳಿಗೆ ಏಕೆ ಗಡಿಪಾರು ಮಾಡಬಾರದು ಎಂದು ಸಹ ನೋಟಿಸ್‌ನಲ್ಲಿ ಕೇಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ದಿನೇಶ್, ಪ್ರಜ್ವಲ್, ಲತೇಶ್ ಗುಂಡ್ಯ, ನಿಶಾಂತ್ ಮತ್ತು ಪ್ರದೀಪ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಲತೇಶ್ ಗುಂಡ್ಯ ಅವರು ಪುತ್ತೂರು ಜಿಲ್ಲೆಯ ಬಜರಂಗದಳದ ಸಹ ಸಮಯೋಜಕರಾಗಿದ್ದಾರೆ.
ಪ್ರಜ್ವಲ್ ಮತ್ತು ದಿನೇಶ್ ಬಜರಂಗದಳದಲ್ಲಿ ತಾಲೂಕು ಮಟ್ಟದ ಜವಾಬ್ದಾರಿಯನ್ನು ಹೊಂದಿದ್ದು, ಇನ್ನಿಬ್ಬರು ಬಲಪಂಥೀಯ ಸಂಘಟನೆಯ ಸ್ವಯಂಸೇವಕರಾಗಿದ್ದಾರೆ.
ಅವರನ್ನು ಏಕೆ ವಜಾಗೊಳಿಸಬಾರದು ಎಂದು ಪ್ರಶ್ನಿಸಿ ನವೆಂಬರ್ 22ರಂದು ಪುತ್ತೂರಿನಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ, 1953ರ ಸೆಕ್ಷನ್ 55ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಒಮ್ಮೆ ಅವರು ಆಯುಕ್ತರ ಮುಂದೆ ಹಾಜರಾದರೆ, ಅವರ ಮೇಲೆ ಒಂದು ವರ್ಷ ಕಾಲ ಪ್ರವೇಶ ನಿರ್ಬಂಧಿಸುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಜುಲೈನಲ್ಲಿ ಮಂಗಳೂರು ನಗರದಿಂದ ಮೂವರು ಬಜರಂಗದಳ ಕಾರ್ಯಕರ್ತರನ್ನು ಹೊರಹಾಕಲಾಗಿತ್ತು. ಆದರೆ, ಬಜರಂಗ ದಳ ಸಂಘಟನೆಯು ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


