ಕೊಡಗು: ಕೇರಳ ಗಡಿಯಲ್ಲಿ ಪೊಲೀಸ್, ನಕ್ಸಲರ ನಡುವೆ ಗುಂಡಿನ ಚಕಮಕಿ
ಕೊಡಗು ಜಿಲ್ಲೆಯ ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಕ್ಸಲ್ ಶಿಬಿರದ ಬಳಿ ನಕ್ಸಲೀಯರು ಮತ್ತು ಕೇರಳದ ನಕ್ಸಲ್ ನಿಗ್ರಹ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದು ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಗಾಯಗೊಂಡಿದ್ದಾನೆ.

ಮಡಿಕೇರಿ: ಕೊಡಗು ಜಿಲ್ಲೆಯ ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಕ್ಸಲ್ ಶಿಬಿರದ ಬಳಿ ನಕ್ಸಲೀಯರು ಮತ್ತು ಕೇರಳದ ನಕ್ಸಲ್ ನಿಗ್ರಹ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದು ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಗಾಯಗೊಂಡಿದ್ದಾನೆ.
ಘಟನೆ ಬಳಿಕ ನಕ್ಸಲರೆಲ್ಲರೂ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ನಕ್ಸಲ್ ಚಿಕಿತ್ಸೆಗಾಗಿ ಮತ್ತು ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಘಟನೆಯ ನಂತರ ಘಟನಾ ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ನಕ್ಸಲರಲ್ಲಿ ಒಬ್ಬರು ಗಾಯಗೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಿಂದ ಮೂರು ರೈಫಲ್‌ಗಳು, ಒಂದು ಲ್ಯಾಪ್‌ಟಾಪ್, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಎಂಟು ಟೆಂಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂಬತ್ತು ನಕ್ಸಲೀಯರು ಇದ್ದಿರಬಹುದು ಎಂದು ಅಂದಾಜಿಸಲಾಗಿದೆ. ನಕ್ಸಲೀಯರು ‘ಕಬಿನಿ’ ಗುಂಪಿನ ಸದಸ್ಯರಾಗಿದ್ದು, ಮೊಯ್ದೀನ್ ಎಂಬ ವ್ಯಕ್ತಿಯ ನೇತೃತ್ವದಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.
ಘಟನೆಯ ನಂತರ ರಾಜ್ಯದ ನಕ್ಸಲ್ ನಿಗ್ರಹ ಪಡೆ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭೇಟಿ ನೀಡಿದ್ದಾರೆ. ಆಸ್ಪತ್ರೆ, ಮೆಡಿಕಲ್ ಶಾಪ್ ಗಳ ಮೇಲೆ ಜಿಲ್ಲಾ ಪೊಲೀಸರು ಕಣ್ಣಿಟ್ಟಿದ್ದಾರೆ. ನಕ್ಸಲೀಯರನ್ನು ಬೆಂಬಲಿಸುವ ಕೇರಳದ ಜನರು ವಾಹನಗಳಲ್ಲಿ ಮೈಸೂರು ಅಥವಾ ಇತರ ದೂರದ ಸ್ಥಳಗಳಿಗೆ ತೆರಳಲು ಸಹಾಯ ಮಾಡುತ್ತಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.
ಕೇರಳ ಪೊಲೀಸರು ನವೆಂಬರ್ 7 ರಂದು ಕೇರಳದ ವಯನಾಡಿನಲ್ಲಿ ಇಬ್ಬರು ಶಂಕಿತ ನಕ್ಸಲೀಯರಾದ ಶ್ರೀಮತಿ ಅಲಿಯಾಸ್ ಉನ್ನಿಮಯ ಮತ್ತು ಚಂದ್ರು ಎಂಬಾತನನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


