ಡಿ. 4 ರಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಹೋಟೆಲ್, ರೆಸಾರ್ಟ್‌ಗಳು ಬುಕ್!
ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಬುಕ್ ಆಗಿವೆ ಎನ್ನಲಾಗಿದೆ.

ಬೆಳಗಾವಿ: ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಬುಕ್ ಆಗಿವೆ ಎನ್ನಲಾಗಿದೆ.
ಡಿಸೆಂಬರ್ 9 ಮತ್ತು 10 (ಶನಿವಾರ ಮತ್ತು ಭಾನುವಾರ) ಹೊರತುಪಡಿಸಿ ಡಿಸೆಂಬರ್ 4 ರಿಂದ 15ರವರೆಗೆ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆಯ ಸಚಿವಾಲಯ ತಿಳಿಸಿದೆ.
ಇದೇ ವೇಳೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿದ್ದು, ಅಧಿವೇಶನ ಸುಗಮವಾಗಿ ನಡೆಯಲು ಬೆಳಗಾವಿ ಜಿಲ್ಲಾಡಳಿತ ಹಲವು ಉಪ ಸಮಿತಿಗಳನ್ನು ರಚಿಸಿದೆ.
ಬೆಳಗಾವಿಯ ಬಹುತೇಕ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಈಗಾಗಲೇ ಬುಕ್ ಆಗಿದ್ದು, ಅಧಿವೇಶನಕ್ಕೆ ಆಗಮಿಸುವವರನ್ನು ಹೊರತುಪಡಿಸಿ ಇತರರಿಗೆ ಕೊಠಡಿಗಳನ್ನು ಬಾಡಿಗೆಗೆ ನೀಡದಂತೆ ಹೋಟೆಲ್ ಮಾಲೀಕರಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಡಳಿತ ರಚಿಸಿರುವ ಸಮಿತಿಗಳು ಸುವರ್ಣ ವಿಧಾನಸೌಧದಲ್ಲಿ ಆಹಾರ, ಸಾರಿಗೆ, ಮಾಧ್ಯಮ, ಮುದ್ರಣ ಸೇರಿದಂತೆ ವಿವಿಧ ಸೌಲಭ್ಯಗಳ ಉಸ್ತುವಾರಿ ವಹಿಸಲಿವೆ. ಅಧಿವೇಶನದ ವೇಳೆ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


