ಡೀಪ್ಫೇಕ್ ಎಫೆಕ್ಟ್: ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಬೆಂಗಳೂರು ಪೊಲೀಸರು
ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.

ಬೆಂಗಳೂರು: ಡೀಪ್ ಫೇಕ್ ವಿಡಿಯೋ ಮೂಲಕ ನಟಿಯರು ಸೇರಿದಂತೆ ಹಲವು ಮಹಿಳೆಯರ ಮಾನ ಕಳೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಂಗಳೂರು ಪೊಲೀಸರು ಈ ಸಂಬಂಧ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದ್ದಾರೆ.
"ಹಿಂಜರಿಕೆ ಬೇಡ, ವೇಗವಾಗಿ ಕೆಲಸ ಮಾಡಿ! ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಡೀಪ್ಫೇಕ್ಗೆ ಒಳಗಾಗಿದ್ದರೆ 1930 ಕರೆ ಮಾಡಿ ಬೆಂಗಳೂರು ನಗರ ಪೊಲೀಸರನ್ನು ಸಂಪರ್ಕಿಸಿ. ಡಿಜಿಟಲ್ ವಂಚನೆಯಿಂದ ನಿಮ್ಮನ್ನು ರಕ್ಷಿಸಲು ನಾವು ನಿಮ್ಮೊಂದಿಗಿದ್ದೇವೆ” ಎಂದು ಬೆಂಗಳೂರು ನಗರ ಪೊಲೀಸರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ.
ಈ ಸಂಬಂಧ ಪೊಲೀಸ್ ಇಲಾಖೆ ಪೋಸ್ಟರ್ ಕೂಡ ಬಿಡುಗಡೆ ಮಾಡಿದ್ದು, ಯಾರಾದರೂ ಡೀಪ್ ಫೇಕ್ ವಿಡಿಯೋಗಳಿಂದ ನೊಂದಿದ್ದರೆ ಸಹಾಯವಾಣಿಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.
ನಟಿಯರಾದ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಮತ್ತು ಕಾಜೋಲ್ ಅವರ ಡೀಪ್ಫೇಕ್ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುವ ಮೂಲಕ ತೀವ್ರ ಆತಂಕ ಸೃಷ್ಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


