ರಾಜ್ಯ

ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ ನಿಧನ 

ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ.ಭಟ್ಟಾಚಾರ್ಯ ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು 83 ವರ್ಷ ವಯಸ್ಸಾಗಿತ್ತು.

ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ ನಿಧನ 
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ.ಭಟ್ಟಾಚಾರ್ಯ ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು 83 ವರ್ಷ ವಯಸ್ಸಾಗಿತ್ತು.  ಅವರು ಪತ್ನಿ, ಕರ್ನಾಟಕದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ಥೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಭಟ್ಟಾಚಾರ್ಯ ಅವರನ್ನು ಶುಕ್ರವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೇ ದಿನ ಸಂಜೆ ಕೊನೆಯುಸಿರೆಳೆದಿದ್ದಾರೆ.

ಭಟ್ಟಾಚಾರ್ಯ ಅವರು ಡಿಸೆಂಬರ್ 30, 2000 ರಂದು ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ನಂತರ ಅವರ ಪತ್ನಿ ಥೆರೆಸಾ ಅವರು ಅಧಿಕಾರ ವಹಿಸಿಕೊಂಡಿದ್ದರು. ಮಾಜಿ ಅಧಿಕಾರಿಯ ನಿಧನಕ್ಕೆ ಐಎಎಸ್ ಅಧಿಕಾರಿಗಳ ಸಂಘ ಸಂತಾಪ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ. 1994-99ರಲ್ಲಿ  ಹಣಕಾಸು ಸಚಿವನಾಗಿದ್ದಾಗ ಅವರು ಹಣಕಾಸು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನೇರ ಅಧಿಕಾರಿಯಾಗಿದ್ದರು ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.